ಬೆಂಗಳೂರು ಆ.25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ನಡೆಸಿ, ಪ್ರಗತಿ ಪರಿಶೀಲನೆ ನಡೆಸಿದರು. ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.











