ಸೋಮವಾರಪೇಟೆ ಆ.26 NEWS DESK : ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿ ಭಾರಿ ಪ್ರಮಾಣದ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಬಡಜನರ ಅನುಕೂಲಕ್ಕಾಗಿ ಸರ್ಕಾರ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಕಡಿಮೆಬೆಲೆಯಲ್ಲಿ ಬೇರೆಡೆ ಸಾಗಿಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಮೇರೆಗೆ ಆಹಾರ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಪಟ್ಟಣದ ತೋಟಗಾರಿಕೆ ಇಲಾಖೆ ಸಮೀಪ ದಾಳಿ ನಡೆಸಿ ಲಾರಿ ಸಹಿತ 142970 ರೂಮೌಲ್ಯದ 4200ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡು, ಆರೋಪಿ ಕೊಣನೂರಿನ ಇದ್ರೀಸ್ ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಆಹಾರ ನಿರೀಕ್ಷಕಿ ಯಶಸ್ವಿನಿ, ಸಿಬ್ಬಂದಿಗಳಾದ ವಿನೋದ್, ಗ್ರಾಮಆಡಳಿತಾದಿಕಾರಿ ನಾಗೇಂದ್ರ ಹಾಗೂ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.











