
ಮಡಿಕೇರಿ ಆ.26 NEWS DESK : ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಗೆ ಅಗತ್ಯ ವಿದ್ದ ಲ್ಯಾಪ್‍ಟಾಪ್ ಅವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿತರಿಸಿದರು. ವಿರಾಜಪೇಟೆ ನಿವಾಸಿ ಸಂಜಯ್ ಎಂಬ ವಿದ್ಯಾರ್ಥಿಗೆ ತಮ್ಮ ಸ್ವಂತ ವೆಚ್ಚದಲ್ಲಿ ಲ್ಯಾಪ್ಟಾಪ್ ವಿತರಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ತಾಲ್ಲೂಕು ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್ ಉಪಸ್ಥಿತರಿದ್ದರು.








