
ಮಡಿಕೇರಿ ಆ.26 NEWS DESK : ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪ ವಿದ್ಯಾನಗರದ ನೂತನ ಬಸ್ ತಂಗುದಾಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು 6.50 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣಗೊಂಡ ಬಸ್ ತಂಗುದಾಣವು, ಸ್ಥಳೀಯ ಪ್ರಯಾಣಿಕರಿಗೆ ಅನುಕೂಲ ಮಾಡುವುದರೊಂದಿಗೆ, ಮಳೆ ಹಾಗೂ ಬಿಸಿಲಿನ ತಾಪಕ್ಕೆ ರಕ್ಷಣೆ ಒದಗಿಸುವಲ್ಲಿ ಸಹಕಾರಿಯಾಗಲಿದೆ. ಈ ಭಾಗದ ಅನೇಕ ಜನರು ಹಾಗೂ ಕಾರ್ಮಿಕರು ತಮ್ಮ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಬಸ್ ಪ್ರಯಾಣವನ್ನೇ ಅವಲಂಬಿಸುತ್ತಿದ್ದು, ಇಂತಹ ಪ್ರಯಾಣಿಕರಿಗೆ ಇದು ಅತ್ಯಂತ ಅನುಕೂಲ ಒದಗಿಸಲಿದೆ ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ ಕುಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ, ಕೋಲಿರ ಜಯ, ವಾಸು, ನಾಯಂದಿರ ಶಿವಾಜಿ ನಗರ ಉಪಾಧ್ಯಕ್ಷರು, ಧ್ಯಾನ್ ಸುಬ್ಬಯ್ಯ, ಕುಸುಮ, ಧನ್ಯ, ಗಣೇಶ್ ಕೆ ಎಂ, ಗ್ಯಾರಂಟಿ ಅನುಷ್ಠಾನ ಸದಸ್ಯರು ಕಲೀದ್, ಪ್ರಮುಖರು ಉಪಸ್ಥಿತರಿದ್ದರು.









