
ನಾಪೋಕ್ಲು ಆ.26 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ನಾಪೋಕ್ಲು ಸರಕಾರಿ ಪದವಿ ಕಾಲೇಜಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಕಾಲೇಜಿನ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡಗಂಟಿಗಳನ್ನು ಕಡಿದು, ಪೇಪರ್, ಪ್ಲಾಸ್ಟಿಕ್‍ಗಳನ್ನು ಘಟಕದ ಪದಾಧಿಕಾರಿಗಳು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ನಾಪೋಕ್ಲು ಮಡಿಕೇರಿ ತಾಲ್ಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ದಿವ್ಯ ಮಂದಪ್ಪ, ಸದಸ್ಯರಾದ ಉಮಾಲಕ್ಷ್ಮಿ, ಚಂದ್ರಕಲಾ, ಶಂಕರ, ದಿಲಿಶ್,,ರಮ್ಯಾ, ಪೊನ್ನಮ್ಮ, ಸುನಿತಾ, ಶರವಣ, ಮಾಯಿಲಪ್ಪ, ನಾರಾಯಣ, ಆಶಾಲತಾ ಉಪಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್ ಬೇಬ, ಸಬಾ, ಕಾಲೇಜು ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು, ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.









