

ಚೆಟ್ಟಳ್ಳಿ ಆ.28 NEWS DESK : ಚೆಟ್ಟಳ್ಳಿ ವೀರಾಂಜನೇಯ ಯುವಕ ಸಂಘದ ವತಿಯಿಂದ 11ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪೂರ್ವಾಹ್ನ ಅರ್ಚಕರಿಂದ ಗಣಪತಿ ಹೋಮ ನಡೆಯಿತು. ನಂತರ ಗಣಪತಿಯ ಉತ್ಸವ ಮೂರ್ತಿಯನ್ನು ಚೆಟ್ಟಳ್ಳಿಯ ಶ್ರೀ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಪ್ರತಿಷ್ಠಾಪಿಸಿ, ಮಹಾಮಂಗಳಾರತಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು.









