ಮಡಿಕೇರಿ ಆ.28 NEWS DESK : ಕರಿಕೆ ಚೆತ್ತುಕಾಯದಲ್ಲಿ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಗಣಪತಿ ಹೋಮ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ನಂತರ ಭಜನೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಸಂಜೆ ಮಕ್ಕಳ ದೀಪದ ಮೆರವಣಿಗೆ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.











