
ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲಾ ಸೆಷನ್ ನ್ಯಾಯಾಲಯ ಮತ್ತು ತಾಲ್ಲೂಕು ಸೆಷನ್ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಪಾರ್ಟ್ ಟೈಮ್ ಕೆಲಸಕ್ಕೆ ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಕೋರ್ಟ್, ಮಡಿಕೇರಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಮಡಿಕೇರಿ ಇಲ್ಲಿಗೆ ತಲಾ ಒಬ್ಬರು ಬೇಕಾಗಿದ್ದಾರೆ. ಹಾಗೆಯೇ ವಿರಾಜಪೇಟೆ ಮತ್ತು ಪೊನ್ನಂಪೇಟೆ ನ್ಯಾಯಾಲಯದಲ್ಲೂ ಸಹ ಮೂರು ವಿಭಾಗಕ್ಕೆ ತಲಾ ಒಬ್ಬರು, ಹಾಗೂ ಸೋಮವಾರಪೇಟೆ ಮತ್ತು ಕುಶಾಲನಗರದಲ್ಲಿ ತಲಾ ಒಬ್ಬರು ಹೊರಗುತ್ತಿಗೆಯಡಿ ಕರ್ತವ್ಯ ನಿರ್ವಹಿಸಲು ಬೇಕಾಗಿದ್ದಾರೆ. ಅರ್ಜಿ ಸಲ್ಲಿಸಲು ಸೆ.4 ಕೊನೆಯ ದಿನವಾಗಿದೆ. ನಿಬಂಧನೆ ಹಾಗೂ ಷರತ್ತುಗಳಿಗೆ ಹತ್ತಿರದ ನ್ಯಾಯಾಲಯದಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.








