

ಮಡಿಕೇರಿ NEWS DESK ಆ.28 : ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಪೂರ್ವಭಾವಿ ತಯಾರಿಗಳನ್ನು ಮಾಡಿಕೊಳ್ಳುವ ಕುರಿತು ಚರ್ಚಿಸಲು ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಆ.29 ರಂದು ದಸರಾ ಸಭೆ ನಡೆಯಲಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ದಸರಾ ಸಮಿತಿ, ದಶಮಂಟಪ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ.








