
ಬೆಂಗಳೂರು ಆ.29 NEWS DESK : ಬೆಂಗಳೂರು ವಕೀಲರ ಸಂಘ ಹಾಗೂ ರವಿವರ್ಮ ಕುಮಾರ್ ಅಸೋಸಿಯೇಟ್ಸ್ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಪ್ರೊಫೆಸರ್ ರವಿವರ್ಮ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಆಹ್ವಾನಿತ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.









