
ವಿರಾಜಪೇಟೆ ಆ.29 NEWS DESK : ಕುಶಾಲನಗರ ವಿವೇಕ ಜಾಗೃತ ಬಳಗದ ವತಿಯಿಂದ ವನಿತಾ ಸಂಗಮ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿವೈನ್ ಪಾರ್ಕ್‍ನ ದಕ್ಷಸೇವಕಿ ದಿವ್ಯ ತೇಜ್‍ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಹಿಳೆಯರ ಕುರಿತಾದ ಡಿವೈಸ್ ಪಾರ್ಕ್‍ನ ವಿಚಾರಗಳನ್ನು ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ ನಡೆಯಿತು. ಸುಮಾರು 180 ಜನ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಬಳಗದ ಅಧ್ಯಕ್ಷರಾದ ಲತಾ ಅಪ್ಪಣ್ಣ ಅಧ್ಯಕ್ಷತೆ ವಹಿಸಿದ್ದರು. ಬಳಗದ ಸದಸ್ಯರುಗಳಾದ ಗಣೇಶ, ಲೋಕಮ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಅಡುಗೆ ಸ್ಪರ್ಧೆಯ ಬಹುಮಾನ ವಿತರಿಸಿ ತೀರ್ಪುಗಾರರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.








