Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸಿ : ಧರ್ಮಜ ಉತ್ತಪ್ಪ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸಿ : ಧರ್ಮಜ ಉತ್ತಪ್ಪ ಸೂಚನೆ*

ಆಗಷ್ಟ್ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.30 NEWS DESK : ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿ.ಪಂ.ಕಚೇರಿಯಲ್ಲಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳು ಜನರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹೆಚ್ಚಿನ ಶಕ್ತಿ ತುಂಬಿದೆ ಎಂದರು. ಗ್ಯಾರೆಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳೂ ಸಹ ಅಗತ್ಯ ಸಹಕಾರ ನೀಡಬೇಕು. ಈ ಹಿಂದೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ನಿರಂತರ ದೂರುಗಳು ದಾಖಲಾಗಿದ್ದು, ಈ ಸಂಬಂಧ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಫಲಾನುಭವಿಯೇ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ತಿಳಿದು ಬಂದಿದ್ದು, ಕಠಿಣ ಕ್ರ,ಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಧರ್ಮಜ ಉತ್ತಪ್ಪ ತಿಳಿಸಿದರು.  ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಶಶಿಧರ್ ಅವರು ಮಾತನಾಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಮಟ್ಟದ ಸಭೆಗಳಿಗೆ ಶಕ್ತಿ ಯೋಜನೆಯ ಕುರಿತು ಚರ್ಚಿಸಲು ಡಿಪೋ ಮ್ಯಾನೇಜರ್ ಅಥವಾ ಎಟಿಎಸ್ ಅವರನ್ನು ಕಳುಹಿಸಬೇಕು. ಅದನ್ನು ಹೊರತುಪಡಿಸಿ ಟಿ.ಸಿ ಗಳನ್ನು ಕಳುಹಿಸುತ್ತಾರೆ. ಅವರಿಗೆ ಶಕ್ತಿ ಯೋಜನೆಯ ಕುರಿತಾಗಿ ಮಾಹಿತಿ ಇರುವುದಿಲ್ಲ. ಮುಂದಿನ ಸಭೆಗಳಲ್ಲಿ ಇಂತಹ ಪರಿಸ್ಥಿತಿ ಉಂಟಾಗಬಾರದು ಎಂದರು. ಬಳಿಕ ಮಾತನಾಡಿದ ಅಧ್ಯಕ್ಷರು ಜಿಲ್ಲಾ ಮಟ್ಟದ ಸಭೆಗೆ 5 ಇಲಾಖೆಗಳ ಮುಖ್ಯಸ್ಥರು ಹಾಜರಾಗಬೇಕು. ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ, ಈಗಾಗಲೇ 5 ಇಲಾಖೆಗಳ ಮುಖ್ಯಸ್ಥರಿಗೂ ಸಭೆಯ ಮಾಹಿತಿ ನೀಡಲಾಗಿದೆ. ಪೂರ್ವಾನುಮತಿ ಪಡೆಯದೆ ಸಭೆಗೆ ಗೈರು ಹಾಜರಾಗುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸು ನೀಡಲಾಗುವುದು ಎಂದು ತಿಳಿಸಿದರು. ಸದಸ್ಯರಾದ ಕಾಂತರಾಜು ಮಾತನಾಡಿ, ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡುತ್ತಿರುವ ಅಕ್ಕಿಯನ್ನು ಫಲಾನುಭವಿಗಳೇ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿದ್ದು, ಆಹಾರ ಸರಬರಾಜು ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ವಹಿಸುವಂತೆ ತಿಳಿಸಿದರು. ಧರ್ಮಜ ಉತ್ತಪ್ಪ ಅವರು ಮಾತನಾಡಿ, ಪ್ರತಿ ತಾಲ್ಲೂಕು ವ್ಯಾಪ್ತಿಯಲ್ಲಿನ ಆಹಾರ ನಿರೀಕ್ಷಕರು ಅಕ್ಕಿ ವಿತರಣೆಯ ಸಂದರ್ಭ ಕಾರ್ಯಾಚರಣೆ ಹಮ್ಮಿಕೊಂಡು ಅನ್ನಭಾಗ್ಯ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು. ಕುಶಾಲನಗರ ವೃತ್ತ ನಿರೀಕ್ಷಕರಾದ ಸ್ವಾತಿ ಅವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಾಳಸಂತೆಕೋರರ ವಿರುದ್ಧ ಕ್ರಮ ಕೈಗೊಂಡಿದ್ದು ಅವರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಅಭಿನಂದನೆಗಳನ್ನು ಸಲ್ಲಿದರು. ಸಮಿತಿ ಸದಸ್ಯರಾದ ಜಾನ್ಸನ್ ಮಾತನಾಡಿ, ತಾಲೂಕು ಮಟ್ಟದ ಕಾರ್ಯಕ್ರಮಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರನ್ನು ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರು ಆಹ್ವಾನಿಸಬೇಕು. ಆದರೆ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಸೂಕ್ತ ರೀತಿಯಲ್ಲಿ ಆಹ್ವಾನಿಸುತ್ತಿಲ್ಲ ಎಂದು ತಿಳಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮ ವಹಿಸಲಾಗುವುದು ಎಂದರು.  ಮತ್ತೋರ್ವ ಸದಸ್ಯರಾದ ಶಶಿಧರ್ ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಡಿಮೆ ಇದ್ದು, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿಗಳು ಮತ್ತಷ್ಟು ಮುತುವರ್ಜಿಯಿಂದ ಕೆಲಸ ನಿರ್ವಹಿಸುವಂತೆ ತಿಳಿಸಿದರು.  ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿ ಮಂಜುನಾಥ್ ಅವರು ಮಾತನಾಡಿ, ಜಿಲ್ಲೆಯ ಪ್ರತಿ ಪದವಿ ಕಾಲೇಜಿನಲ್ಲಿಯೂ ವಿಶೇಷ ಅಭಿಯಾನ ಮತ್ತು ಬ್ಯಾನರ್ ಅಳವಡಿಸಿ ಮಾಹಿತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಪ್ರಚಾರ ಕಾರ್ಯ ಕೈಗೊಳ್ಳಲಾಗುವುದು ಎಂದರು.  ಸಮಿತಿ ಸದಸ್ಯರಾದ ಮಂದ್ರೀರ ಮೋಹನ್ ದಾಸ್ ಮಾತನಾಡಿ, ಕೊಡಗು ಮಾತ್ರವಲ್ಲದೆ ಕೊಡಗಿನ ಮೂಲದ ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪದವಿ ಮುಗಿಸಿರುತ್ತಾರೆ. ಅಂತಹ ವಿದ್ಯಾರ್ಥಿಗಳ ಮಾಹಿತಿಯನ್ನು ಸಹ ಕಲೆ ಹಾಕಿ ಅವರಿಗೂ ಯೋಜನೆಯ ಲಾಭ ತಲುಪುವಂತೆ ಕ್ರಮ ವಹಿಸಬೇಕು ಎಂದರು.  ಸಭೆಯಲ್ಲಿ ಉಪಾಧ್ಯಕ್ಷರಾದ ಶರಿ ಗಿರೀಶ್, ಕೆ.ಸಿ.ಭೀಮಯ್ಯ, ನಾಸೀರ್, ಪಂಕಜ, ಸದಸ್ಯರಾದ ಎಸ್.ಕೆ.ಸುಂದರ, ಕೆ.ಎಂ.ಬಶೀರ್, ಮುಸ್ತಫ, ಪಿ.ಎಲ್. ಸುರೇಶ್, ಧನ್ಯ ರವೀಂದ್ರ, ಕೆ.ಜಿ.ಪೀಟರ್, ಕಾಂತರಾಜು, ಕಾಳಿಮಾಡ ಪ್ರಶಾಂತ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.