ನಾಪೋಕ್ಲು ಸೆ.1 NEWS DESK : ನಾಪೋಕ್ಲು ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಕೆಲಸ ನಿರ್ವಹಿಸಿದ್ದಕ್ಕಾಗಿ ಡಿಸಿಸಿ ಬ್ಯಾಂಕ್ ನಿಂದ ಕೊಡಲ್ಪಡುವ ಸಹಕಾರ ಸಂಘ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಡಿಕೇರಿಯಲ್ಲಿ ಜರುಗಿದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಮತ್ತು ನಗದು ನೀಡಿ ಗೌರವಿಶಲಾಯಿತು. ಬಹುಮಾನವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಗಣಪತಿ ಹಾಗೂ, ಪದಾಧಿಕಾರಿಗಳಿಂದ ಸಂಘದ ಅಧ್ಯಕ್ಷರಾದ ಕೇಟೋಳಿರ ಹರೀಶ್ ಪೂವಯ್ಯ, ನಿರ್ದೇಶಕರಾದ ಅರೆಯಡ ರತ್ನ ಪೆಮ್ಮಯ್ಯ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶಿವಚಳಿಯಂಡ ವಿಜು ಪೂನಚ್ಚ ಸ್ವೀಕರಿಸಿದರು.
ವರದಿ : ದುಗ್ಗಳ ಸದಾನಂದ.










