
ವಿರಾಜಪೇಟೆ NEWS DESK ಸೆ.2 : ವಿರಾಜಪೇಟೆಯಲ್ಲಿ ಇಂದು ಶಾಸಕರ ವಿಶೇಷ ನಿಧಿಯಿಂದ ಕ್ಷೇತ್ರದ ಆಯ್ದ ಅರ್ಹ ವಿಶೇಷ ಚೇತನ ಫಲಾನುಭವಿಗಳಿಗೆ ದ್ವಿಚಕ್ರವಾಹನವನ್ನು ವಿತರಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿ ಸಮಾಜದಲ್ಲಿ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸಲು ಈ ಸೌಲಭ್ಯ ಒದಗಿಸಲಾಗುತ್ತಿದೆ. ವಿಶೇಷ ಚೇತನರು ತಮ್ಮ ನ್ಯೂನತೆಯನ್ನು ಮರೆತು ಸಮಾಜದಲ್ಲಿ ತಮ್ಮ ಕೈಲಾದ ಸಾಧನೆಯನ್ನು ಮಾಡಲು ಪ್ರಯತ್ನಿಸಬೇಕೆಂದು ಕಿವಿಮಾತು ಹೇಳಿದರು. ವಿಶೇಷ ಆದ್ಯತೆ ಮೇರೆಗೆ ತಾನು ಸಹಾಯ ಮಾಡಲು ಸದಾ ಸಿದ್ಧವಿರುವುದಾಗಿ ಭರವಸೆ ನೀಡಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪುರಸಭೆ ಸದಸ್ಯರಾದ ರಜಿನಿಕಾಂತ್, ರಾಫಿ, ಪಕ್ಷದ ಪ್ರಮುಖ ಜೋಕಿಮ್, ಕುಂದಚೀರ ಮಂಜು ದೇವಯ್ಯ, ಶಬೀರ್, ಮಂಜುನಾಥ್, ಮಹದೇವ, ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.








