
ಮಡಿಕೇರಿ ಸೆ.2 NEWS DESK : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪೊನ್ನಂಪೇಟೆ ತಾಲ್ಲೂಕಿನ ನೂತನ ಕಚೇರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಒಂದು ಶತಮಾನಕ್ಕೂ ಅಧಿಕ ಇತಿಹಾಸವುಳ್ಳ ಸ್ವಯಂ ಸೇವಕ ಸಂಸ್ಥೆಯು, ನಾಗರೀಕ ಸೇವೆಯಲ್ಲಿ, ಸಮಾಜಕ್ಕೆ ಒದಗಿದ ವಿವಿಧ ಸಂಕಷ್ಟದ ಸಮಯದಲ್ಲಿ ಹಾಗೂ ಶೋಷಿತ ಸಮಾಜದ ಪರ ಕೆಲಸ ಮಾಡುವಲ್ಲಿ ಮುಂಚೂಣಿಯಲ್ಲಿದೆ. ಪ್ರಪಂಚದಾದ್ಯಂತ ಉತ್ತಮ ಹೆಸರು ಮಾಡಿರುವ ಈ ಸಂಸ್ಥೆಯ ಪೊನ್ನಂಪೇಟೆ ಘಟಕವು ಯಶಸ್ಸು ಕಾಣುತ್ತಾ, ಜನಮನದಲ್ಲಿ ಛಾಪು ಮೂಡಿಸಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಹಶೀಲ್ದಾರರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.









