


ಮಡಿಕೇರಿ ಆ.2 NEWS DESK : ಭಾಗಮಂಡಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. 2006-2007 ನೇ ಸಾಲಿನಲ್ಲಿ ಏಳನೇ ತರಗತಿ ವರೆಗೆ ಶಾಲೆಯಲ್ಲಿ ವ್ಯಾಸಂಗ ಮುಗಿಸಿದ ವಿದ್ಯಾರ್ಥಿ ವೃಂದ ವಿದ್ಯೆ ಕಲಿಸಿದ ಗುರುಗಳನ್ನು ಆಹ್ವಾನಿಸಿ ಸನ್ಮಾನ ಮಾಡಿ ಗೌರವಿಸಿದರು. ನಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಳೇ ವಿದ್ಯಾರ್ಥಿಗಳು ರೂಪಾಯಿ 23,000 ವೆಚ್ಚದ ಪ್ರೊಜೆಕ್ಟರ್ ಮತ್ತು ಮಕ್ಕಳಿಗೆ ತಟ್ಟೆ, ಲೋಟ ಗಳನ್ನು ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿಗಳಾದ ಸರ್ಫುದ್ದೀನ್, ನೌಫಲ್, ಶೃತಿ, ಧನಲಕ್ಷ್ಮಿ, ಜೆ.ಎನ್.ಮನೋಜ್ ಸೇರಿದಂತೆ 40ಕ್ಕೂ ಹೆಚ್ಚಿನ ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಔತಣಕೂಟ ಏರ್ಪಡಿಸಲಾಗಿತ್ತು.








