
ನಾಪೋಕ್ಲು ಸೆ.2 NEWS DESK : ಗೌರಿಗಣೇಶೋತ್ಸವದ ಅಂಗವಾಗಿ ಪಟ್ಟಣದ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಆ.27 ರಂದು ಪ್ರತಿಷ್ಠಾಪಿಸಲಾಗಿದ್ದ ಗೌರಿಗಣೇಶ ಮೂರ್ತಿಗಳ ವಿಸರ್ಜನೋತ್ಸವದ ಶೋಭ ಯಾತ್ರೆಯು ಅತ್ಯಂತ ಸಂಭ್ರಮದಿಂದ ನಡೆಯಿತು. ಕಕ್ಕುಂದ ಕಾಡಿನ ವೆಂಕಟರಮಣ ದೇವಾಲಯದ ಗಣಪತಿ ಸೇವಾ ವತಿಯಿಂದ 20ನೇ ವರ್ಷದ ಅದ್ದೂರಿ ಗೌರಿ ಗಣೇಶ ಉತ್ಸವ ಸಮಿತಿ ವತಿಯಿಂದ ಮಹಾ ಪೂಜೆಯ ಬಳಿಕ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಸುಳ್ಯದ ನಾಸಿಕ್ ಬ್ಯಾಂಡ್ ಕಲಾತಂಡದೊಂದಿಗೆ ಪಟ್ಟಣದಲ್ಲಿ ಅಲಂಕೃತ ಮಂಟಪ ಸಾಗಿತು. ಈ ಸಂದರ್ಭ ಸಂತೆ ಮೈದಾನದಲ್ಲಿ ಅನ್ನದಾನ ನಡೆಯಿತು. ಸೇವಾ ಸಮಿತಿ ಅಧ್ಯಕ್ಷ ತಂಗ, ಕಾರ್ಯದರ್ಶಿ ಮಹೇಶ್, ಖಜಾಂಚಿ ಸೂರ್ಯ ಕುಮಾರ್ ಹಾಗೂ ಸಮಿತಿ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು. ಇಂದಿರಾನಗರದ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ 20ನೇ ವರ್ಷದ ಗೌರಿ ಗಣೇಶ ಉತ್ಸವದಲ್ಲಿ ಸ್ಥಳೀಯರಿಂದ ಹಾಡುಗಾರಿಕೆ, ಓಂಕಾರ್ ರವಿ ಬಳಗದಿಂದ ಸಂಗೀತ ಸಂಜೆ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಸಂಜೆ ಪಂಚಮುಖಿ ಗಣಪತಿಯ ಅತ್ಯಾಕರ್ಷಕ ಪ್ರತಿರೂಪ ದೊಂದಿಗೆ ಸೌಂಡ್ಸ್, ಲೈಟಿಂಗ್ಸ್ ವಿಶೇಷವಾಗಿತ್ತು. ಈ ಸಂದರ್ಭ ಸೇವಾ ಸಮಿತಿಯ ಅಧ್ಯಕ್ಷರಾದ ಹರಿದಾಸ್, ಉಪಾಧ್ಯಕ್ಷ ಶಶಿ, ಕಾರ್ಯದರ್ಶಿ ಸುನಿಲ್, ಖಜಾಂಚಿ ವಿನಿಲ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಹಳೆತಾಲೂಕು ಶ್ರೀ ಪೆÇನ್ನುಮುತ್ತಪ್ಪ ವಿನಾಯಕ ಸೇವಾ ಸಮಿತಿ ವತಿಯಿಂದ 16ನೇ ವರ್ಷದ ಅದ್ದೂರಿ ಗೌರಿ ಗಣೇಶ ಉತ್ಸವದಲ್ಲಿ ಮಡಿಕೇರಿ ರಾಕಿ ತಂಡದಿಂದ ಪೌರಾಣಿಕ ಕಥಾವಸ್ತು ಟ್ಯಾಬ್ಲೋ, ಸೌಂಡ್ಸ್ ಮತ್ತು ಲೈಟಿಂಗ್ ಪ್ರದರ್ಶನ ಸಾರ್ವಜನಿಕರನ್ನು ರೋಮಾಂಚನಗೊಳಿಸಿತು. ಈ ಸಂದರ್ಭ ಸಮಿತಿ ಅಧ್ಯಕ್ಷ ದಿಲೀಪ್, ಉಪಾಧ್ಯಕ್ಷ ಮಹೇಶ್, ಕಾರ್ಯದರ್ಶಿ ಪ್ರದೀಪ್, ಖಜಾಂಚಿ ಚೇತನ್, ಸಮಿತಿ ಸದಸ್ಯರು ಜೊತೆಗಿದ್ದರು. ನಾಪೆÇೀಕ್ಲುನಾಡು ಗೌರಿ-ಗಣೇಶ ಸಮಿತಿ ವತಿಯಿಂದ ಹಳೆತಾಲ್ಲೂಕಿನ ಭಗವತಿ ದೇವಾಲಯದಲ್ಲಿ ತಿಷ್ಠಾಪಿಸಲಾಗಿದ್ದ ಗೌರಿಗಣೇಶ ಮೂರ್ತಿಯನ್ನು ವಿಶೇಷ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಅಧ್ಯಕ್ಷರಾದ ಕಲಿಯಂಡ ವಿಠಲ ಮುದ್ದಯ್ಯ, ಕಾರ್ಯದರ್ಶಿ ಶಿವಚಾಳಿಯಂಡ ಜಗದೀಶ್, ಸಮಿತಿ ಸದಸ್ಯರು, ವಿವಿಧ ಸೇವಾ ಸಮಿತಿಗಳು ಪಾಲ್ಗೊಂಡಿದ್ದರು. ವಿಶೇಷ ವಾದ್ಯಮೇಳ ಹಾಗೂ ಸೌಂಡ್ಸಿಗೆ ಸಾರ್ವಜನಿಕರು ಕುಣಿದು ಕುಪ್ಪಲಿಸುವುದರೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ಅಲಂಕೃತ ವಾಹನಗಳಲ್ಲಿ ಕೊಂಡೊಯ್ದು ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ ಜನಸಾಗರಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠರಾದ ರಾಮರಾಜನ್ ಆಗಮಿಸಿ ಅವರ ಮಾರ್ಗದರ್ಶನದಂತೆ, ಡಿ ವೈ ಎಸ್ ಪಿ ಸೂರಜ್, ವೃತ ನಿರೀಕ್ಷಕ (ಸಿ ಐ) ಅನೂಪ್ ಮಾದಪ್ಪ, ಠಾಣಾಧಿಕಾರಿ ರಾಘವೇಂದ್ರ ಮತ್ತು ಸಿಬ್ಬಂದಿಗಳಿಂದ ವಿಶೇಷ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ವರದಿ : ದುಗ್ಗಳ ಸದಾನಂದ.









