


ಮಡಿಕೇರಿ ಸೆ.2 NEWS DESK : ಕೊಡಗು ಪತ್ರಕರ್ತರ ಸಂಘ (ರಿ), ಅಖಿಲ ಕರ್ನಾಟಕ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಘಟಕದ ಸಂಯುಕ್ತ ಆಶ್ರಯದಲ್ಲಿ ಸೆ.4 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಗುರುವಾರ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾದ ಎಸ್.ಎ. ಮುರಳೀಧರ ಅವರು ವಹಿಸಲಿದ್ದು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಪತ್ರಿಕಾ ಭವನ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಎಂ ಪಿ ಕೇಶವ ಕಾಮತ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ ಚಿದ್ವಿಲಾಸ್, ಮಡಿಕೇರಿಯ ಹಿರಿಯ ಓದುಗರಾದ ಪಿ.ಎ.ನಾಣಯ್ಯ
ಅಖಿಲ ಕರ್ನಾಟಕ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಘಟಕದ ಅಧ್ಯಕ್ಷ ಟಿ.ಜಿ.ಸತೀಶ್ ಪಾಲ್ಗೊಲಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ.








