
ಮಡಿಕೇರಿ ಸೆ.4 NEWS DESK : ಮದೆ ಸಹಕಾರ ಬ್ಯಾಂಕಿಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿಂದ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ವತಿಯಿಂದ 2023 -24 ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಮದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬ್ಯಾಂಕಿನ ಬಹುಮಾನ ಯೋಜನೆ ಅಡಿಯಲ್ಲಿ 10,000 ನಗದು ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗಿದೆ. ಈ ಬಹುಮಾನವನ್ನು ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.











