ಮಡಿಕೇರಿ ಸೆ.4 NEWS DESK : ಪ್ರಸಕ್ತ (2025-26) ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಮೊಣಕಾಲ್ಮುರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ಆರ್.ಶಾಲಿನಿ, ಅರೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಡಿ.ಮೀನಾಕ್ಷಿ, ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಎಂ.ವನಜ, ಸೋಮವಾರಪೇಟೆ ತಾಲ್ಲೂಕಿನ ಬಡುಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ವಿ.ಜಾನ್ಸಿ, ಕೂಡಿಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ಎ.ಯೋಗೇಶ್, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ) ಮುಖ್ಯ ಶಿಕ್ಷಕರಾದ ಅಬ್ದುಲ್ ರಬ್ ಎಂ.ಎಸ್., ವಿರಾಜಪೇಟೆ ತಾಲ್ಲೂಕಿನ ಎಮ್ಮೆಗುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಕೆ.ಮಾಚಮ್ಮ, ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಸುಷಾ ಕೆ.ಕೆ., ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಡಿ.ಲೋಕೇಶ್ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.












