
ಮಡಿಕೇರಿ ಸೆ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕಿನ ಮೊಣಕಾಲ್ಮುರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ಆರ್.ಶಾಲಿನಿ, ಅರೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಡಿ.ಮೀನಾಕ್ಷಿ, ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಎಂ.ವನಜ, ಸೋಮವಾರಪೇಟೆ ತಾಲ್ಲೂಕಿನ ಬಡುಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ವಿ.ಜಾನ್ಸಿ, ಕೂಡಿಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ಎ.ಯೋಗೇಶ್, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ) ಮುಖ್ಯ ಶಿಕ್ಷಕರಾದ ಅಬ್ದುಲ್ ರಬ್ ಎಂ.ಎಸ್., ವಿರಾಜಪೇಟೆ ತಾಲ್ಲೂಕಿನ ಎಮ್ಮೆಗುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಕೆ.ಮಾಚಮ್ಮ, ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಸುಷಾ ಕೆ.ಕೆ., ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಡಿ.ಲೋಕೇಶ್ ಅವರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪ್ರಶಸ್ತಿ ಪ್ರದಾನ ಮಾಡಿದರು.









