
ವಿರಾಜಪೇಟೆ ಸೆ.6 NEWS DESK : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿನಲ್ಲಿ ನೀಡುತ್ತಿರುವ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಬಿಳುಗುಂದ ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ಅರುಣ ಆನ್ಸಿ ಡಿಸೋಜ ಅವರು ಭಾಜನರಾಗಿದ್ದಾರೆ. ಬೆಂಗಳೂರಿನ ಭಾರತದ ಜೋಡೋ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರು ಶಿಕ್ಷಣ ಕ್ಷೇತ್ರದಲ್ಲಿ 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ವಿರಾಜಪೇಟೆಯ ಗಾಡ್ವಿನ್ ಡಿಸೋಜ ಅವರ ಪತ್ನಿ. ನಿವೃತ್ತ ಶಿಕ್ಷಕರಾದ ಆಲ್ಬರ್ಟ್ ಡಿಸೋಜಾ ಹಾಗೂ ದಿವಂಗತ ಜುಲಿಯಾನ ಲೋಬೋ ಅವರ ಪುತ್ರಿ.









