
ಮಡಿಕೇರಿ ಸೆ.6 NEWS DESK : ಚಂದ್ರಗ್ರಹಣ ಪ್ರಯುಕ್ತ ಸೆ.7 ರಂದು ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ಸಂಜೆ 5 ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಇರುವುದಿಲ್ಲ. ಆದುದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.









