ಮಡಿಕೇರಿ ಸೆ.6 NEWS DESK : ಐರಿ ಸಮಾಜದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಕೈಲ್ಪೋಲ್ದ್ ಒತ್ತೊರ್ಮೆ ಕೂಟವು ಅ.12 ರಂದು ಅರಮೇರಿ ಗ್ರಾಮದಲ್ಲಿರುವ ಐರಿ ಸಮಾಜದ ನಿವೇಶನದಲ್ಲಿ ನಡೆಯಲಿದೆ ಎಂದು ಐರಿ ಸಮಾಜದ ಕಾರ್ಯದರ್ಶಿ ಕಾಮೆಯಂಡ ಗಣೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಐರಿ ಸಮಾಜದ ಅಧ್ಯಕ್ಷ ಮೇಲತ್ತಂಡ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ವಾರ್ಷಿಕ ವರದಿ ಮಂಡನೆ, ಲೆಕ್ಕಪತ್ರ ಮಂಡನೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ. ಮಹಾಸಭೆಯ ಬಳಿಕ ಐರಿ ಜನಾಂಗ ಬಾಂಧವರಿಗಾಗಿ ಕೈಲ್ಪೋಲ್ದ್ ಒತ್ತೊರ್ಮೆ ಕೂಟ ಆಯೋಜಿಸಲಾಗಿದ್ದು, ಇದರಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಿದ್ದಾರೆ. ಜೊತೆಗೆ ಜನಾಂಗ ಬಾಂಧವರಿಗಾಗಿ ಇದೇ ಮೊದಲ ಬಾರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಕೂಡ ಆಯೋಜಿಸಲಾಗಿದ್ದು, ವಿಜೇತರಿಗೆ ಆಕರ್ಷಕ ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುವುದೆಂದು ತಿಳಿಸಿದರು. ಇದೇ ವೇಳೆ ಮಹಿಳೆಯರು ಮತ್ತು ಮಕ್ಕಳಿಗಾಗಿ ವಿವಿಧ ಮನರಂಜನಾ ಕಾರ್ಯಮಗಳೂ ನಡೆಯಲಿದ್ದು, ಜನಾಂಗ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕಾಮೆಯಂಡ ಗಣೇಶ್ ಕೋರಿದ್ದಾರೆ.










