Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 2 ರಂದು ಜಂಬೂರುವಿನಲ್ಲಿ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ : ಗಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ : ಗಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ*

ಸೆಪ್ಟೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೂಡಿಗೆ ಸೆ.8 NEWS DESK : ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಮತ್ತು ಶಿಕ್ಷಕರ ಕಲ್ಯಾಣ ನಿಧಿಯ ಸಂಯುಕ್ತಾಶ್ರಯದಲ್ಲಿ ಕೂಡಿಗೆಯ ಡಯಟ್ ಸಂಸ್ಥೆಯ ಮೈದಾನದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ತಾಲ್ಲೂಕುಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ,  ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನ ಹರಿಸುವ ಶಿಕ್ಷಕರು ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ, ಸಾಂಸ್ಕೃತಿಕ ಹವ್ಯಾಸಗಳನ್ನು ಮರೆತು ಬಿಟ್ಟಿರುತ್ತಾರೆ. ಹೀಗಾಗಿ ಇಂತಹ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳು ಶಿಕ್ಷಕರಿಗೆ ವೃತ್ತಿ ಜೀವನದಲ್ಲಿ ಚಿರಸ್ಮರಣಿಯವಾಗಿ ಉಳಿಯುತ್ತವೆ ಎಂದರು. ಕ್ರೀಡಾಕೂಟದಲ್ಲಿ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಒಳ್ಳೆಯ ಬೆಳವಣಿಗೆ. ಶಿಕ್ಷಕರ ದಿನವನ್ನು ಭಾರತದ ಎರಡನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನದ ನೆನಪಿನಲ್ಲಿ ಆಚರಿಸಲಾಗುತ್ತದೆ. ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವುದು ಇದರ ಉದ್ದೇಶ ಎಂದು ಬಿಇಓ ಕೃಷ್ಣಪ್ಪ ತಿಳಿಸಿದರು.  ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್ ಮಾತನಾಡಿ, ಇಂತಹ ಸ್ಪರ್ಧೆಗಳು ಶಿಕ್ಷಕರ ದಿನನಿತ್ಯದ ಚಟುವಟಿಕೆಗಳಿಗೆ ಹೆಚ್ಚಿನ ಉತ್ಸಾಹ ಹಾಗೂ ಪ್ರೇರಣೆ ನೀಡುತ್ತವೆ. ಶಿಕ್ಷಕರು ಮಕ್ಕಳ ಕಲಿಕೆ ಜತೆಗೆ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು.  ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್.ಎ.ಯೋಗೇಶ್, ಅಬ್ದುಲ್ ರಬ್, ಝಾನ್ಸಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್, ತಾಲ್ಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಜಿ.ಎಂ.ಹೇಮಂತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಎಚ್.ಎನ್.ಮಂಜುನಾಥ್, ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್..ಪ್ರಸನ್ನಕುಮಾರ್, ಜಿಲ್ಲಾ ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹೇಂದ್ರ, ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಕಾರ್ಯದರ್ಶಿ ಎಸ್.ನಾಗರಾಜ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ನಿರ್ದೇಶಕ ಯಶವಂತ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಕಾರ್ಯದರ್ಶಿ ಟಿ.ವಿ.ಶೈಲಾ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ್, ಶಿಕ್ಷಕರ ವಿವಿಧ ಸಂಘಟನೆಯ ಪ್ರಮುಖರಾದ ಸೋಮಯ್ಯ, ಎಚ್.ಪಿ.ಕರುಂಬಯ್ಯ, ದಿನೇಶ್, ಜಿ.ಪಿ.ಕವಿತ, ಸುಜಾತ, ಸುರೇಶ್, ಗಾಯತ್ರಿ ಮತ್ತಿತರರು ಇದ್ದರು. :: ಗಮನ ಸೆಳೆದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ::  ಶಿಕ್ಷಕರು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿವಿಧ ಕಲೆಗಳನ್ನು ಅನಾವರಣಗೊಳಿಸಿದರು. ಶಿಕ್ಣಕಿಯರು ಹಾಡುಗಾರಿಕೆ, ಜಾನಪದ ನೃತ್ಯ, ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಕ್ರೀಡಾಕೂಟದ ಅಂಗವಾಗಿ ಪುರುಷ ಶಿಕ್ಷಕರಿಗೆ ವಾಲಿಬಾಲ್, ಕಬಡ್ಡಿ, ಕ್ರಿಕೆಟ್ ಟೂರ್ನಿ ಗಳು, ಮಹಿಳಾ ಶಿಕ್ಷಕರಿಗೆ ಥ್ರೋಬಾಲ್ ಮತ್ತಿತರ ಕ್ರೀಡೆಗಳಲ್ಲಿ ಪಾಲ್ಗೊಂಡು ಪರಸ್ಪರ ಕ್ರೀಡಾ ಸ್ಪೂರ್ತಿ ಮೆರೆದರು. ಕ್ರೀಡಾಕೂಟದಲ್ಲಿ ಭಾಗವಹಿಸಿದ ಶಿಕ್ಷಕರಿಗೆ ಮಧ್ಯಾಹ್ನ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ತಾಲ್ಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಿಂದ‌ ಆಗಮಿಸಿದ್ದ ಶಿಕ್ಷಕರು ಹಾಗೂ ಶಿಕ್ಷಕಿಯರು ಕ್ರಿಢಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂತಸಪಟ್ಟರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 2 ರಂದು ಜಂಬೂರುವಿನಲ್ಲಿ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 1, 2026

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಏ.30 NEWS DESK : ಆರ್ಯವೈಶ್ಯ ಕುಲದೇವತೆ ಶ್ರೀಮದ್ ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ಜಯಂತಿಯ ಅಂಗವಾಗಿ ವಾಸವಿ ಮಾತೆಗೆ…

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.