

ಮಡಿಕೇರಿ ಸೆ.9 NEWS DESK : ಗೋಣಿಕೊಪ್ಪ ಲಯನ್ಸ್ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಸಣ್ಣುವಂಡ ರಶ್ಮಿ, ಕರ್ನಂಡ ಕೃತಿಕಾ ಅಕ್ಕಮ್ಮ, ಕರ್ನಂಡ ಶತಕ ಕಾವೇರಮ್ಮ ಭಾಗವಹಿಸಿ ಚಿನ್ನದ ಪದಕ ಪಡೆದು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಇವರಿಗೆ ಕರಾಟೆ ಬೋಧಕರಾದ ಸೋಮಣ್ಣ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.









