ಮಡಿಕೇರಿ ಸೆ.10 NEWS DESK : ಸೋಮವಾರಪೇಟೆ ಮನೆಹಳ್ಳಿ ಮಠದ ಶ್ರೀ ತಪೋಕ್ಷೇತ್ರದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಲಕ್ಷ ಬಿಲ್ವಾರ್ಚನೆ ಪೂಜೆ ನಡೆಯಿತು. ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನಡೆಸಿ, ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.











