
ಮಡಿಕೇರಿ ಸೆ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆಯು ಸೆಪ್ಟೆಂಬರ್, 17 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಕೊಡಗು ಜಿಲ್ಲಾ ನಿರ್ದೇಶಕರಾದ ಕೆ.ಎಸ್.ಚಂದ್ರಶೇಖರ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕರಾದ ಎಚ್.ಎನ್.ಸುಬ್ರಮಣ್ಯ, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ.ದೇವದಾಸ್, ವಿಶ್ವಕರ್ಮ ಸಮಾಜ ಸೇವಾ ಸಂಘದ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಬಿ.ಜಗದೀಶ್ ಆಚಾರ್ಯ, ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಬಿ.ಬಿ.ನಾಗರಾಜು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಇತರರು ಪಾಲ್ಗೊಳ್ಳಲಿದ್ದಾರೆ.








