
ವಿರಾಜಪೇಟೆ ಸೆ.10 NEWS DESK : ವಿರಾಜಪೇಟೆಯ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ಮದರ್ ತೆರೇಸಾ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸಂತ ಅನ್ನಮ್ಮ ದ್ವಿ ಶತಮಾನೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಾಹಿತಿಗಳಾದ ರಜಿತ ಕಾರ್ಯಪ್ಪ ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಅಧ್ಯಕ್ಷರು ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಪೆರಿಗ್ರೀನ್ ಎಸ್ ಮಚ್ಚಾಡೋ, ಉಪಾಧ್ಯಕ್ಷರಾದ ಮಾರ್ಟಿನ್ ಬರ್ನಾಡ್, ಸಂತ ಅನ್ನಮ್ಮ ಪಾಲಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಜೋಕಿಂ ರಾಡ್ರಿಗೀಸ್, ಉದ್ಯಮಿ ಚೋಪಿ ಜೋಸೆಫ್, ಜೇಮ್ಸ್ ಮೆನೇಜಸ್, ನಿವೃತ್ತ ಪ್ರಾಂಶುಪಾಲರಾದ ಚಾಲ್ರ್ಸ್ ಡಿಸೋಜಾ ಸಂಘದ ಸದಸ್ಯರಾದ ಕೆ.ಟಿ. ಥೋಮಸ್, ಅರುಣ ಆನ್ಸಿ ಡಿಸೋಜಾ, ಅನಿತಾ ನರೋನ, ಮದರ್ ತೆರೆಸಾ ಸೇವಾ ಕೇಂದ್ರದ ಸದಸ್ಯರುಗಳು, ಪದಾಧಿಕಾರಿಗಳು, ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.









