ನಾಪೋಕ್ಲು ಸೆ.11 NEWS DESK : ಚೆರಿಯಪರಂಬು ಆಟದ ಮೈದಾನದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂದಲ್ಲಿ ನಾಪೋಕ್ಲುವಿನ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟದಲ್ಲಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಡಿಕೇರಿ, ಕೊಡಗು ಜಿಲ್ಲೆ ಹಾಗೂ ನಾಪೋಕ್ಲು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದ ಬಾಲಕರ ಖೋಖೋ ಪ್ರಥಮ ಸ್ಥಾನ, ಕಬಡ್ಡಿ ದ್ವಿತೀಯ ಸ್ಥಾನ, ಪ್ರಾಥಮಿಕ ವಿಭಾಗದ ಬಾಲಕಿಯರ ವಿಭಾಗದ ಖೋಖೋ ಪ್ರಥಮ ಸ್ಥಾನ, ಪ್ರೌಢ ಬಾಲಕರ ವಿಭಾಗದ ಖೋಖೋ ಪ್ರಥಮ ಸ್ಥಾನ, ಪ್ರೌಢ ವಿಭಾಗದ ಬಾಲಕಿಯರ ಖೋಖೋ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಪ್ರಾಂಶುಪಾಲರಾದ ಕೆ.ಡಿ.ನೀತಾ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಶ್ಯಾಮಿಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ವರದಿ : ದುಗ್ಗಳ ಸದಾನಂದ.











