ಮಡಿಕೇರಿ ಸೆ.11 NEWS DESK : ದಿ ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ 2024-2025ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ವರದಿಯನ್ನು ಪರಿಶೀಲಿಸಿ ಮುಂದಿನ ಸಾಲಿಗೆ ಬೇಕಾದಂತಹ ಅಗತ್ಯ ಸಲಹೆ ಸೂಚನೆಗಳನ್ನು ಚರ್ಚಿಸಿ, ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಕಾಫಿ ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.











