
ಮಡಿಕೇರಿ ಸೆ.11 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕುಂಜಿಲ-ಕಕ್ಕಬೆ ಪಂಚಾಯತ್ ವ್ಯಾಪ್ತಿಯ ಪುದಿಯೋಡಿ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಗೆ ಸಜ್ಜಾಗಿ ನಿಂತಿದೆ. ಇಗ್ಗುತ್ತಪ್ಪ ದೇವಸ್ಥಾನ ಬಳಿಯ ರಸ್ತೆಗೆ ಈ ಹಿಂದೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದ ಸಂದರ್ಭ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವ ಭರವಸೆಯನ್ನು ನೀಡಿದ್ದರು. ಅದರಂತೆ ರಸ್ತೆಯ ಕಾಂಕ್ರೀಟೀಕರಣಕ್ಕೆ 5 ಲಕ್ಷವನ್ನು ಬಿಡುಗಡೆ ಮಾಡಿದ್ದರು. ಈಗ ಕಾಮಗಾರಿ ಗುಣಮಟ್ಟದಲ್ಲಿ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆ ಗೊಳ್ಳಲಿದೆ. ಇದಕ್ಕೆ ಸಹಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಕೆಡಿಪಿ ಸದಸ್ಯರಾದ ಬಾಚಮಾಂಡ ಲವ ಚಿಣ್ಣಪ್ಪ, ಕಕ್ಕಬೆ ಪಂಚಾಯಿತಿ ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ ಮತ್ತು ಪ್ರಮುಖರಿಗೆ ಸ್ಥಳೀಯರು ಧನ್ಯವಾದ ಅರ್ಪಿಸಿದ್ದಾರೆ.









