

ಮಡಿಕೇರಿ ಸೆ.12 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ, ತಾಲೂಕು ಮತ್ತು ಹೋಬಳಿ ಪದಾಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರನ್ನೊಳಗೊಂಡ ಪೂರ್ಣ ಪ್ರಮಾಣದ ಕಾರ್ಯಕಾರಿ ಮಂಡಳಿಯ ಸಭೆಯು ಸೆ.14 ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಭಾಂಗಣದಲ್ಲಿ ನಡೆಯಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ವಹಿಸಿಕೊಳ್ಳಲಿದ್ದಾರೆ. ಸಭೆಯಲ್ಲಿ ಮುಂದಿನ ಸಾಲಿನ ಕನ್ನಡ ಕಾರ್ಯಕ್ರಮಗಳು, ನವೆಂಬರ್ ನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ, ತಾಲ್ಲೂಕು ಮತ್ತು ಜಿಲ್ಲಾ ಸಮ್ಮೇಳನಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣ, ಮುಂದೆ ನಡೆಸುವ ದತ್ತಿ ಕಾರ್ಯಕ್ರಮ ಮತ್ತು ಕನ್ನಡಪರ ಕಾರ್ಯಕ್ರಮ ಸೇರಿದಂತೆ ಹಲವಾರು ವಿಚಾರಗಳ ಚರ್ಚೆ ನಡೆಯಲಿದೆ. ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೆಲ್ಲರೂ ಈ ಸಭೆಯಲ್ಲಿ ಪಾಲ್ಗೊಂಡು ಕನ್ನಡ ಕಾರ್ಯಕ್ರಮಗಳಿಗೆ ಸಹಕರಿಸಬೇಕಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ ಮುನೀರ್ ಅಹ್ಮದ್, ರೇವತಿ ರಮೇಶ್ ಮತ್ತು ಗೌರವ ಕಾರ್ಯದರ್ಶಿ ಎಸ್ಎಸ್ ಸಂಪತ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










