
ಮಡಿಕೇರಿ NEWS DESK ಸೆ.13 : ಇದೇ ಅಕ್ಟೋಬರ್ 17 ರಂದು ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಕುರಿತು ಪೂರ್ವಭಾವಿ ಸಭೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಹಳೆಮುಡಿ ಕಟ್ಟಡದಲ್ಲಿ ನಡೆಯಲಿದೆ. ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ತುಲಾ ಸಂಕ್ರಮಣ ಜಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳು ಕೋರಿದ್ದಾರೆ.









