Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾಕ್ಕೆ ಕೇವಲ ಒಂದು ವಾರ ಬಾಕಿ : ರಸ್ತೆ ಅವ್ಯವಸ್ಥೆಗೆ ಸಮಿತಿಗಳು, ಸಾರ್ವಜನಿಕರು ಬೇಸರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾಕ್ಕೆ ಕೇವಲ ಒಂದು ವಾರ ಬಾಕಿ : ರಸ್ತೆ ಅವ್ಯವಸ್ಥೆಗೆ ಸಮಿತಿಗಳು, ಸಾರ್ವಜನಿಕರು ಬೇಸರ*

ಸೆಪ್ಟೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.14 : ನೂರಾರು ವರ್ಷಗಳ ಇತಿಹಾಸವಿರುವ ಮಡಿಕೇರಿ ದಸರಾ ಜನೋತ್ಸವಕ್ಕೆ ಕೇವಲ ಒಂದು ವಾರ ಬಾಕಿ ಉಳಿದಿದೆ. ದಸರಾ ಹಬ್ಬದ ಪ್ರಮುಖ ಧಾರ್ಮಿಕ ಆಚರಣೆಯಾದ ಕರಗಗಳ ನಗರ ಸಂಚಾರ ಮುಂದಿನ ವಾರದಿಂದ ಆರಂಭವಾಗುತ್ತದೆ. ಆದರೆ ನಗರದ ಎಲ್ಲಾ ರಸ್ತೆಗಳು ಹೊಂಡ, ಗುಂಡಿಗಳಿಂದ ಕೂಡಿರುವುದರಿಂದ ದಸರಾ ಸಮಿತಿಗಳು ಬೇಸರ ವ್ಯಕ್ತಪಡಿಸಿವೆ. ಪ್ರತಿವರ್ಷ ಮಡಿಕೇರಿ ಮಹೋತ್ಸವ ಆರಂಭವಾಗುವುದೇ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ. ಸುಮಾರು ಒಂಭತ್ತು ದಿನಗಳ ನಗರ ಸಂಚಾರದ ಮೂಲಕ ಕರಗಗಳು ಭಕ್ತರಿಂದ ಪೂಜೆಯನ್ನು ಸ್ವೀಕರಿಸುತ್ತವೆ. 10 ನೇ ದಿನವಾದ ವಿಜಯದಶಮಿಯಂದು ಹತ್ತು ದೇವಾಲಯಗಳ ದಶಮಂಟಪಗಳ ಶೋಭಾಯಾತ್ರೆ ವೈಭವದಿಂದ ಸಾಗುತ್ತದೆ. ಆದರೆ ಮಡಿಕೇರಿ ನಗರದ ರಸ್ತೆಗಳು ಕರಗಗಳ ನಗರ ಸಂಚಾರ ಮತ್ತು ದಶಮಂಟಪಗಳ ಶೋಭಾಯಾತ್ರೆಗೆ ಯೋಗ್ಯವಾಗಿಲ್ಲ. ಕಳೆದ ಮೂರು ತಿಂಗಳ ಕಾಲ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದ ನಗರಸಭಾ ವ್ಯಾಪ್ತಿಯ ಎಲ್ಲಾ 23 ವಾರ್ಡ್ಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೊಂಡ, ಗುಂಡಿಗಳಿಂದ ಕೂಡಿದೆ. ನಗರದ ಹೃದಯ ಭಾಗದ ಶ್ರೀ ಓಂಕಾರೇಶ್ವರ ದೇವಾಲಯ ರಸ್ತೆ, ರಾಜಾಶೀಟ್ ರಸ್ತೆ, ಗೌಳಿಬೀದಿ ರಸ್ತೆ, ಕೊಹಿನೂರ್ ರಸ್ತೆ, ಮಹದೇವಪೇಟೆ ರಸ್ತೆ, ಇಂದಿರಾಗಾAಧಿ ವೃತ್ತ ರಸ್ತೆ, ಮಲ್ಲಿಕಾರ್ಜುನ ನಗರ ರಸ್ತೆ, ಗಣಪತಿ ಬೀದಿ ಮತ್ತು ಹೆಸರುವಾಸಿ ಪ್ರವಾಸಿತಾಣ ಅಬ್ಬಿ ಜಲಪಾತದ ರಸ್ತೆಗಳಲ್ಲಿ ವಾಹನಗಳ ಸಂಚಾರ ಅಸಾಧ್ಯವಾಗಿದೆ.
ದಸರಾದ ಹಿನ್ನೆಲೆ ಮಡಿಕೇರಿ ನಗರಕ್ಕೆ ಲಕ್ಷಕ್ಕೂ ಮೀರಿ ಪ್ರವಾಸಿಗರು ಆಗಮಿಸುತ್ತಾರೆ, ಸಾವಿರಾರು ವಾಹನಗಳು ಪ್ರವೇಸಿಸುತ್ತವೆ. ಆದರೆ ರಸ್ತೆಗಳ ಹೊಂಡ, ಗುಂಡಿಗಳು ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗಿವೆ, ಹದಗೆಟ್ಟ ರಸ್ತೆಗಳಿಂದ ನಗರದ ಸೌಂದರ್ಯಕ್ಕೆ ದಕ್ಕೆಯಾಗಿದೆ. ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣವಿದ್ದರೂ ರಸ್ತೆಗಳ ಡಾಂಬರೀಕರಣ ಕಾರ್ಯ ಆರಂಭಿಸದ ನಗರಸಭೆ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿ ಅಧಿಕ ಮಳೆಯಾಗಿರುವ ಹಿನ್ನೆಲೆ ಎಲ್ಲಾ ರಸ್ತೆಗಳಿಗೆ ಹಾನಿಯಾಗಿದ್ದು, ಗುಂಡಿ ಮುಚ್ಚುವ ಕಾರ್ಯ ಶೀಘ್ರ ಆರಂಭಗೊಳ್ಳಲಿದೆ ಎಂದು ನಗರಸಭೆಯ ಪೌರಾಯುಕ್ತ ಹೆಚ್.ಆರ್.ರಮೇಶ್ ತಿಳಿಸಿದ್ದಾರೆ. *ಗುಣಮಟ್ಟದ ಕಾಮಗಾರಿ ನಡೆಯಲಿ* ಕರಗೋತ್ಸವ ಮತ್ತು ದಶಮಂಟಪಗಳ ಯಶಸ್ವಿ ನಿರ್ವಹಣೆಗೆ ನಗರಸಭೆಯ ಸಹಕಾರ ಅತಿ ಮುಖ್ಯ. ಪ್ರಸ್ತುತ ಮಡಿಕೇರಿಯ ಹಲವು ರಸ್ತೆಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ. ಇವುಗಳನ್ನು ಎನ್.ಡಿ.ಆರ್.ಎಫ್ ಹಾಗೂ ನಗರಸಭೆ ನಿಧಿಯಿಂದ ತ್ವರಿತವಾಗಿ ಅಭಿವೃದ್ಧಿಪಡಿಸಬೇಕು. ಕೊನೆಯ ಹಂತದಲ್ಲಿ ಕಾಮಗಾರಿ ಕೈಗೆತ್ತಿಕೊಂಡರೆ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಶೀಘ್ರ ರಸ್ತೆ ಕಾಮಗಾರಿ ಆರಂಭಿಸಬೇಕು, ಎಷ್ಟು ಅನುದಾನವನ್ನು ರಸ್ತೆಗಳ ಅಭಿವೃದ್ಧಿಗಾಗಿ ವಿನಿಯೋಗಿಸಲಾಗುತ್ತಿದೆ ಎನ್ನುವುದನ್ನು ಸಾರ್ವಜನಿಕವಾಗಿ ತಿಳಿಸಬೇಕು. ಗುಣಮಟ್ಟದ ಕಾಮಗಾರಿ ನಡೆಸಿ, ಸಾರ್ವಜನಿಕರ ಸುಗಮ ಸಂಚಾರ ಹಾಗೂ ದಸರಾ ಉತ್ಸವದ ಯಶಸ್ಸಿಗೆ ಕೈಜೋಡಿಸಬೇಕು. ಮುಂದಿನ ವರ್ಷದ ದಸರಾ ವೇಳೆಗೆ ನಗರದಲ್ಲಿ ಸರ್ವಋತು ರಸ್ತೆಗಳನ್ನು ನಿರ್ಮಿಸಬೇಕು. (ಬಿ.ಎಂ.ಹರೀಶ್ ಅಣ್ವೇಕರ್, ಅಧ್ಯಕ್ಷರು, ಮಡಿಕೇರಿ ದಸರಾ ದಶಮಂಟಪ ಸಮಿತಿ)

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.