
ಮಡಿಕೇರಿ ಸೆ.15 NEWS DESK : 47ನೇ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಶ್ರೀ ಕಾವೇರಿ ದಸರಾ ಸಮಿತಿಯಿಂದ ಆಹ್ವಾನಿಸಲಾಯಿತು. ಈ ಸಂದರ್ಭ ಸಮಿತಿಯ ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪ್ರಧಾನ ಕಾರ್ಯದರ್ಶಿ ಕಂದ ದೇವಯ್ಯ, ಖಜಾಂಚಿ ಧ್ಯಾನ್ ಸುಬ್ಬಯ್ಯ, ಸಂಯೋಜಕ ಚಂದನ್ ಕಾಮತ್, ವೇದಿಕೆ ಸಮಿತಿಯ ಗುರು, ಯುವ ದಸರಾ ಅಧ್ಯಕ್ಷ ಅಂಕಿತ್ ಪೊನ್ನಪ್ಪ ಉಪಸ್ಥಿತರಿದ್ದರು.








