
ಮಡಿಕೇರಿ ಸೆ.15 NEWS DESK : ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಆಯೋಜನೆ ಕೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ದಸರಾ ಉತ್ಸವದ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಪ್ರಸಿದ್ಧ ಉತ್ಸವಕ್ಕೆ ಕೈಗೊಂಡ ತಯಾರಿಯ ಬಗ್ಗೆ ಹಾಗೂ ಆಗಬೇಕಾಗಿರುವಂತಹ ಎಲ್ಲಾ ವ್ಯವಸ್ಥೆಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರೊಂದಿಗೆ ಚರ್ಚಿಸಿದರು. ಜನಸಾಮಾನ್ಯರಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗೆ ಹಾಗೂ ಸಂಬಂಧ ಪಟ್ಟ ಎಲ್ಲಾ ಇಲಾಖೆಗಳು ದಸರಾ ಉತ್ಸವವನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಕ್ರಮಕೈಗೊಳ್ಳಬೇಕೆಂದು ಶಾಸಕ ಎ.ಎಸ್.ಪೊನ್ನಣ್ಣ ಅವರುಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಾಮರಾಜನ್, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಮಡಿಕೇರಿ ನಗರ ಸಭೆ ಅಧ್ಯಕ್ಷರಾದ ಕಲಾವತಿ, ಗೋಣಿಕೊಪ್ಪ ಹಾಗೂ ಮಡಿಕೇರಿ ದಸರಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.








