Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಯುವ ಪೀಳಿಗೆ ರಾಜಕೀಯದ ಅರಿವು ಮೂಡಿಸಬೇಕು : ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಯುವ ಪೀಳಿಗೆ ರಾಜಕೀಯದ ಅರಿವು ಮೂಡಿಸಬೇಕು : ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು

ಸೆಪ್ಟೆಂಬರ್ 15, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.15 NEWS DESK : ಪ್ರಜಾಪ್ರಭುತ್ವ ಇತಿಹಾಸವನ್ನು ಹೊಂದಿದಂತಹ ಭಾರತದಲ್ಲಿ ಜನಿಸಲು ನಾವೇ ಪುಣ್ಯವಂತರು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶ ಅಭಿವೃದ್ಧಿಯಾಗುತ್ತದೆ, ಜನಸಂಖ್ಯೆಯಲ್ಲಿ ವ್ಯತ್ಯಾಸ ಕಾಣುತ್ತಿದೆ. ದೇಶವು ಸುಸ್ಥಿರವಾಗಿದೆ. ಜಾತಿ ಧರ್ಮ ಭೇದಭಾವ ಇಲ್ಲದೆ ಹೀಗೆ ಸಾಗಬೇಕೆಂದರೆ ನಮ್ಮ ಮತ-ನಮ್ಮ ಹಕ್ಕು ಎನ್ನುವ ಘೋಷ ವಾಕ್ಯವನ್ನು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಯೂ ಮತ ಚಲಾಯಿಸುವ ಮುಖಾಂತರ ಪಾಲಿಸಬೇಕು ಎಂದರು. ಪ್ರಜಾಪ್ರಭುತ್ವ ಆಡಳಿತದ ಮೇಲೆ ಯುವ ಪೀಳಿಗೆ ಒಲವು ಮೂಡಿಸುವ ಕಾರ್ಯಕ್ರಮ ಹೆಚ್ಚಿಸಬೇಕು. ರಾಜಕೀಯದ ಆಡಳಿತ ಕುರಿತು ಶಿಕ್ಷಣವನ್ನು ನೀಡಬೇಕು. ಯುವ ಪೀಳಿಗೆಯನ್ನು ಸೇರಿಸಿಕೊಂಡು ರಾಜಕೀಯ ಕಾರ್ಯಕ್ರಮಗಳನ್ನು ನಡೆಸುವಂತಾಗಬೇಕು. ಆಗಲೇ ರಾಜ್ಯವು ಸುಸ್ಥಿರವಾಗಿರುವುದು ಎಂದು ನುಡಿದರು. ಅಕ್ಕ-ಪಕ್ಕದ ರಾಷ್ಟ್ರದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯನ್ನು ಗಮನಿಸಿ, ಅದನ್ನರಿತುಕೊಂಡು ಮುಂದಾಗುವ ಕೆಡುಕನ್ನು ತಪ್ಪಿಸಲು ಪ್ರಜೆಗಳೆಲ್ಲರೂ ಒಟ್ಟುಗೂಡಿ ದೇಶಕ್ಕೆ ಒಳಿತನ್ನು ಮಾಡಬೇಕು ಎಂದು ತಿಳಿಸಿದರು. ಸಂವಿಧಾನವನ್ನು ಪ್ರತಿಯೊಬ್ಬರ ಜೀವನದಲ್ಲಿಯೂ ಅನ್ವಯ ಮಾಡಿಕೊಳ್ಳುವಂತಾಗಬೇಕು. ಹಾಗೆಯೇ ಪಾಲಿಸಿ ಗೌರವಿಸಬೇಕು. ಪ್ರತಿಯೊಬ್ಬರೂ ನಾಯಕರೇ, ನಾಯಕನಾಗಿ ನಾಯಕನಂತೆ ಮಾತನಾಡಬೇಕು. ಪ್ರಶ್ನಿಸುವ ಮನೋಭಾವನೆಯನ್ನು ಬೆಳೆಸಿಕೊಂಡು ತಮ್ಮ-ತಮ್ಮ ಹಕ್ಕುಗಳನ್ನು ದೊರಕಿಸಿಕೊಳ್ಳಬೇಕು ಎಂದು ನುಡಿದರು. ರಾಜಕೀಯಕ್ಕೆ ಯುವಶಕ್ತಿ ಪ್ರೇರಣೆಯಾಗಿದೆ ಎಂದರು. ಯುವಜನರು ಹೆಚ್ಚಿನ ಆಸಕ್ತಿ ಕೊಟ್ಟು ಶಿಕ್ಷಣ ಪಡೆದು ಆಡಳಿತ ಕ್ಷೇತ್ರದ ಹುದ್ದೆಯನ್ನು ಪಡೆಯಬೇಕು ಎಂದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಲವು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತ ರಾಷ್ಟ್ರಕ್ಕೆ ಉತ್ತಮ ಸಂವಿಧಾನ ನೀಡಿದ್ದಾರೆ ಎಂದು ಹೇಳಿದರು. “ರಾಜಕೀಯ ವ್ಯವಸ್ಥೆಯಲ್ಲಿ ಸಾರ್ವಜನಿಕರೇ ಆಸ್ತಿ” ಎಂದು ನೆಲ್ಸನ್ ಮಂಡೇಲಾ ಹೇಳಿದಂತೆ ನಾವೆಲ್ಲರೂ ನಡೆದುಕೊಳ್ಳಬೇಕು ಎಂದು ತಿಳಿಸಿದರು. ಪ್ರಜಾಪ್ರಭುತ್ವವನ್ನು ನಾಯಕರುಗಳು ಮಾತ್ರವಲ್ಲ ಸಾರ್ವಜನಿಕರು ಕಾಪಾಡಬೇಕು ಎಂದು ತಿಳಿಸಿದರು. ಅಂಬೇಡ್ಕರ್ ಸಂಘಟನೆ ವತಿಯಿಂದ ಬಂದ ಬೇಡಿಕೆಯನ್ನು ಸ್ವೀಕರಿಸಿ ಅತ್ಯಂತ ಶೀಘ್ರದಲ್ಲಿ ಪೂರೈಸುತ್ತೇವೆ ಎಂದು ಸಂಘಟನೆಯ ಕಾರ್ಯದರ್ಶಿಗಳು ಹಾಗೂ ಮುಖಂಡರಿಗೆ ಆಶ್ವಾಸನೆ ನೀಡಲಾಯಿತು. ಜಿಲ್ಲಾ ಮಟ್ಟದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡುವುದಾಗಿ ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದರು. ನಗರದ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕ ಬಳಿ ಅಂಬೇಡ್ಕರ್ ಸ್ಮಾರಕ ನಿರ್ಮಿಸಲು ಗಣ್ಯರಿಂದ ಸ್ಥಳ ವೀಕ್ಷಿಸಲಾಯಿತು. ಮುಖ್ಯ ಭಾಷಣಕಾರರಾಗಿ ಆಗಮಿಸಿದ ಎಫ್‍ಎಂಕೆಎಂಸಿ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಧರ್ ಅವರು ಮಾತನಾಡಿ ರಾಷ್ಟ್ರಮಟ್ಟದಿಂದ ಅಂತರಾಷ್ಟ್ರೀಯ ಮಟ್ಟಕ್ಕೆ ನಮ್ಮ ಭಾರತ ಸಂವಿಧಾನ ತಲುಪಿದ್ದು, ಇಂತಹ ಮಹತ್ವಪೂರ್ಣ ಘಟನೆಯು ಭಾರತವನ್ನು ವಿಶ್ವದಾದ್ಯಂತ ಗುರುತಿಸಲು ಸಾಧ್ಯವಾಗಿದ್ದು ಸಂತೋಷಕರ ಸಂಗತಿಯಾಗಿದೆ ಎಂದರು. ಜನರ ಆಡಳಿತ ಮೂಲ ಶಕ್ತಿ ಜನರೇ ಆಗಬೇಕು ಎನ್ನುವುದು ಪ್ರಜಾಪ್ರಭುತ್ವದ ಆಶಯ ಇದಕ್ಕೆ ಮೂಲ ಕಾರಣವೇ ನಮ್ಮ ಭಾರತದ ಸಂವಿಧಾನ ಎಂದರು. ಜಾತಿ ಧರ್ಮ ಮತದ ಯಾವುದನ್ನು ಲೆಕ್ಕಿಸದೆ ಸಾರ್ವತ್ರಿಕ ಚುನಾವಣೆಯ ಮೂಲಕ ನಡೆಯುತ್ತಿರುವ ಭಾರತದ ಆಡಳಿತ ವ್ಯವಸ್ಥೆ ಅತ್ಯಂತ ಪ್ರಬಲವಾಗಿದೆ. ಭಯ ಇಲ್ಲದ ವಾತಾವರಣ ಸ್ಥಾಪಿಸಬೇಕಾದರೆ ದೇಶದ ಒಳಗೆ ಪ್ರಜಾಪ್ರಭುತ್ವ ಶಕ್ತಿಶಾಲಿಯಾಗಿ ಪರಿಣಾಮ ಬೀರಬೇಕು ಎಂದು ನುಡಿದರು. ಡಿ.ಎಸ್.ಎಸ್ ಸಂಚಾಲಕರಾದ ದಿವಾಕರ್ ಅವರು ಮಾತನಾಡಿ ಅಂಬೇಡ್ಕರ್ ಭವನ ಸ್ಥಾಪನೆಗೆ ಸ್ಥಳ ಅವಕಾಶವನ್ನು ನೀಡಬೇಕೆಂದು ಮೊದಲು ಗುರುತಿಸಲಾದ ಸ್ಥಳವು ಸಮಿತಿಗೆ ಅಸಮಾಧಾನಕರವಾಗಿದ್ದು ಬೇರೆ ಸ್ಥಳವನ್ನು ನಿಗದಿಪಡಿಸಬೇಕೆಂದು ಗಣ್ಯರಲ್ಲಿ ಮನವಿ ಮಾಡಿದರು. ಈ.ರಾಜು ಮತ್ತು ತಂಡದವರು ಸಂವಿಧಾನ ಕುರಿತು ಹಾಡು ಹಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮದ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮಂದ್ರಿರ ಮೋಹನ್ ದಾಸ್, ನಗರಸಭೆ ಸದಸ್ಯರಾದ ಸತೀಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್‍ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶೇಖರ್, ದಲಿತ ಸಂಘರ್ಷ ಸಮಿತಿ ಪ್ರಮುಖರಾದ ವೀರಭದ್ರಯ್ಯ, ದೀಪಕ್, ರಾಜು, ಜನಾರ್ಧನ, ಜಗದೀಶ್, ಮಡಿಕೇರಿ ತಾಲೂಕು ತಹಶೀಲ್ದಾರ್ ಶ್ರೀಧರ್, ಡಿಎಸ್‍ಎಸ್ ಸಂಚಾಲಕರಾದ ದಿವಾಕರ್, ಮೋಹನ್ ಮೌರ್ಯ, ದೀಪಕ್ ಪೊನ್ನಪ್ಪ, ಗಣೇಶ್, ಗೋಪಾಲ್ ಮತ್ತಿತರರು ಇದ್ದರು. ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳು ನಾಡಗೀತೆ ಹಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶೇಖರ್ ಅವರು ಸ್ವಾಗತಿಸಿ, ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.