
ಮಡಿಕೇರಿ ಸೆ.28 NEWS DESK : ನಾಕೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಸಹಯೋಗದೊಂದಿಗೆ ಸುಂಟಿಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ವ್ಯವಸ್ಥಾಪಕ ಅನಿಕೇತ್, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ಹಾಗೂ ವಾರ್ಷಿಕವಾಗಿ 436/-ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000/-ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು .ಎರಡನ್ನೂ ಮಾಡಿಸಿಕೊಂಡಲ್ಲಿ 400000/-ರೂ ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು.ಅಲ್ಲದೆ 60ವಯಸ್ಸು ಆದನಂತರದಲ್ಲಿ ಪಿಂಚಣಿರೂಪದಲ್ಲಿ 1000ರೂ ಗಳಿಂದ 5000ರೂ ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು. ನಂತರ ಆರ್ಥಿಕ ಸಮಾಲೋಚಕರದ ನಬಿ ಅವರು ಮಾತನಾಡಿ, ಪ್ರತಿಯೊಬ್ಬರು ರೀ ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು. ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು, ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕರಾದ ಸಿ.ಜಿ.ಹರೀಶ್ ತಿಳಿಸಿದರು. ಕೊನೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಜಗನ್ನಾಥ್ ಮಾತನಾಡಿ, ಈ ಕಾರ್ಯಕ್ರಮವು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ ಕುಮಾರಿ, ಕೆನರಾ ಬ್ಯಾಂಕಿನ ವ್ಯವಸ್ಥಾಪಕರು ಅನಿಕೇತ್ ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕರು ಸೆಲ್ವ ಕುಮಾರ್ ಆರ್ಥಿಕ ಸಲಹೆಗಾರರಾದ ನಬಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು. ಹರೀಶ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.









