Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ಅಗತ್ಯ ಸಿದ್ಧತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ಅಗತ್ಯ ಸಿದ್ಧತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ*

ಸೆಪ್ಟೆಂಬರ್ 16, 20255 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.16 NEWS DESK : ತಲಕಾವೇರಿಯಲ್ಲಿ ಅ.17 ರಂದು ಜರುಗುವ ಪವಿತ್ರ ಕಾವೇರಿ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಅ.17 ರಂದು ಮಧ್ಯಾಹ್ನ 1.44 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಸಚಿವರು ಸೂಚಿಸಿದರು. ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಚಿವರು ಸೂಚಿಸಿದರು. ಜಿಲ್ಲಾಡಳಿತದ ಸಲಹೆ ಸೂಚನೆಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಶುಚಿತ್ವಕ್ಕೆ ಒತ್ತು ನೀಡಬೇಕು. ಕುಡಿಯುವ ನೀರು ಪೂರೈಸಬೇಕು. ಭಕ್ತಾಧಿಗಳಿಗೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಬೇಕು. ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಕೆಲಸವನ್ನು ಚಾಚು ತಪ್ಪದೇ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. ಸೆ.26 ರಿಂದ ವಿವಿಧ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿದೆ. ಸಮಸ್ಯೆಗಳು ಇದ್ದಲ್ಲಿ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಬೇಕು. ಜೊತೆಗೆ ಶಾಸಕರ ಗಮನಕ್ಕೂ ತಂದಲ್ಲಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೆÇನ್ನಣ್ಣ ಅವರು ಮಾತನಾಡಿ ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ತಿಳಿಸಿದರು. ನಾಡಿನ ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವ ಒಂದು ವಿಶಿಷ್ಟವಾಗಿದ್ದು, ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತಾಧಿಗಳಿಗೆ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು. ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ತಾತ್ಕಾಲಿಕ ಶೌಚಾಲಯ, ಶುದ್ಧ ಕುಡಿಯುವ ನೀರು ಮತ್ತಿತರ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಯಿಂದ ಸ್ವಚ್ಛತೆಗೆ ಒತ್ತು ನೀಡಲಾಗುವುದು. ಈ ಸಂಬಂಧ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ, ಪ್ರತೀ ಬಾರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು ಭಕ್ತಾಧಿಗಳು ಸಹಕರಿಸಬೇಕು ಎಂದು ಕೋರಿದರು. ತಲಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸೂಕ್ತ ಬಂದೋಬಸ್ತ್ ಮಾಡಲಾಗುವುದು. ಅಗತ್ಯ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಹೇಳಿದರು. ಅಗತ್ಯವಿರುವ ಕಡೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಬ್ಯಾರಿಕೇಡ್‍ಗಳ ನಿರ್ವಹಣೆ ಮಾಡಲಾಗುವುದು ಎಂದರು. ವಾಹನಗಳ ನಿಲುಗಡೆಗೆ ವ್ಯವಸ್ಥೆ, ಸಂಚಾರ ದಟ್ಟಣೆ ನಿಯಂತ್ರಣ ಮಾಡುವುದು. ಭಕ್ತಾಧಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹಿರಿಯರು ಹಾಗೂ ಮಕ್ಕಳು ಎಲ್ಲರೂ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಕಳೆದ ಬಾರಿ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಈ ಬಾರಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ನಿರ್ದೇಶನ ನೀಡಿದರು. ಗ್ರಾ.ಪಂ.ಸ್ಥಳೀಯ ಸದಸ್ಯರಾದ ಹೊಸೂರು ಸತೀಶ್‍ಕುಮಾರ್ ಮಾತನಾಡಿ, ತೀರ್ಥೋದ್ಭವ ದಿನದಂದು ತಲಕಾವೇರಿಗೆ ತೆರಳುವವರು ಮುಂಚಿತವಾಗಿ ಯಾವ ವೇಳೆ ಒಳಗೆ ತೆರಳಬೇಕು ಎಂಬ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಕೋರಿದರು. ಬಿದ್ದಾಟಂಡ ಎಸ್.ತಮ್ಮಯ್ಯ ಮಾತನಾಡಿ, ತಲಕಾವೇರಿಯ ವಾಹನ ನಿಲುಗಡೆ ಸ್ಥಳದಲ್ಲಿ ಜಾಗ ಖಾಲಿ ಇದ್ದರೂ ‘ಮಿಸ್ ಗೈಡ್’ ಮಾಡುತ್ತಾರೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು. ಈ ಬಾರಿ ಮಧ್ಯಾಹ್ನ ವೇಳೆಯಲ್ಲಿ ತೀರ್ಥೋದ್ಭವ ಸಂಭವಿಸುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಲಿದ್ದು, ತೀರ್ಥೋದ್ಧವದ ಮುಂಚಿತವಾಗಿ 2 ಗಂಟೆಯೊಳಗೆ ಭಕ್ತಾಧಿಗಳು ತೆರಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಲಕಾವೇರಿಗೆ ಇಷ್ಟು ಗಂಟೆಯೊಳಗೆ ತೆರಳಬೇಕು ಎಂದು ಸಮಯ ನಿಗಧಿ ಮಾಡಲು ಸಾಧ್ಯವಿಲ್ಲ. ತೀರ್ಥ ತೆಗೆದುಕೊಂಡು ಹೋಗುವ ಮತ್ತು ಬರುವ ವಾಹನಗಳಿಗೆ ಮಾತ್ರ ವಾಹನ ಪಾಸ್ ನೀಡಲಾಗುತ್ತದೆ ಎಂದು ತಿಳಿಸಿದರು. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಈ ಬಾರಿ ಪವಿತ್ರ ತೀರ್ಥೋದ್ಭವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ಭಾಗಮಂಡಲ-ತಲಕಾವೇರಿ, ತಲಕಾವೇರಿ-ಭಾಗಮಂಡಲ ಮಾರ್ಗದಲ್ಲಿ 25 ಕ್ಕೂ ಹೆಚ್ಚು ಬಸ್ಸು ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಈ ಮಾರ್ಗದಲ್ಲಿ ಪ್ರಯಾಣಿಕರಿಗೆ ತೀರ್ಥೋದ್ಭವದಂದು ಉಚಿತ ಪ್ರಯಾಣಕ್ಕೆ ಅವಕಾಶ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಈರಸಪ್ಪ ಅವರು ಕಳೆದ ಬಾರಿ 15 ಬಸ್‍ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಈ ಬಾರಿ ಹೆಚ್ಚಿನ ಬಸ್ಸು ಕಲ್ಪಿಸಲಾಗುವುದು ಎಂದರು. ಕಾವೇರಿ ನೀರಾವರಿ ನಿಗಮದ ಇಇ ಪುಟ್ಟಸ್ವಾಮಿ ಮಾತನಾಡಿ, ಹೂಳು ತೆಗೆಯುವುದು ಸೇರಿದಂತೆ ಮೇಲ್ಸುತುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ಮಾತನಾಡಿ ತ್ರಿವೇಣಿ ಸಂಗಮದಲ್ಲಿ ಬೇಸಿಗೆ ಅವಧಿಯಲ್ಲಿ ನೀರು ಕಡಿಮೆಯಾಗುತ್ತದೆ. ಆದ್ದರಿಂದ ಚೆಕ್‍ಡ್ಯಾಂ ನಿರ್ಮಾಣ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಕೋರಿದರು. ಸೆಸ್ಕ್ ಇಇ ರಾಮಚಂದ್ರ ಅವರು ಮಾತನಾಡಿ ಪವಿತ್ರ ತೀರ್ಥೋದ್ಭವಕ್ಕೆ ಸೆಸ್ಕ್ ವಿಭಾಗದಿಂದ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರಮುಖರಾದ ಸೂರ್ತಲೆ ಸೋಮಣ್ಣ, ಗಣಿ ಪ್ರಸಾದ್, ಕುದುಕುಳಿ ಭರತ್ ಅವರು ಮಡಿಕೇರಿ ಭಾಗಮಂಡಲ ರಸ್ತೆ ತ್ವರಿತವಾಗಿ ಗುಂಡಿ ಮುಚ್ಚುವ ಕಾರ್ಯ ಆಗಬೇಕು ಎಂದು ಮನವಿ ಮಾಡಿದರು. ಸ್ಥಳೀಯರೊಬ್ಬರು ಅಕ್ಟೋಬರ್, 17 ಮತ್ತು 18 ರಂದು 2 ದಿನಗಳ ಕಾಲ ಭಾಗಮಂಡಲ ಮತ್ತು ತಲಕಾವೇರಿ ದೀಪಾಲಂಕಾರ ವ್ಯವಸ್ಥೆ ಮಾಡಬೇಕು ಎಂದು ಕೋರಿದರು. ಇದಕ್ಕೆ ಶಾಸಕರು ಸಮ್ಮತಿ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೇಕಲ್ ರಾಮನಾಥ್ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡುತ್ತಾರೆ. ಆದ್ದರಿಂದ ಗುಣಮಟ್ಟದ ರಸ್ತೆಯನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು. ‘ಈ ಸಂದರ್ಭದಲ್ಲಿ ಮಾತನಾಡಿದ ಹೊಸೂರು ಸತೀಶ್ ಕುಮಾರ್ ಅವರು ಮಡಿಕೇರಿ-ಭಾಗಮಂಡಲ ಮಾರ್ಗವನ್ನು ದ್ವಿಪಥ ರಸ್ತೆ ನಿರ್ಮಾಣ ಮಾಡಬೇಕು ಎಂದು ಸಲಹೆ ಮಾಡಿದರು.’ ಪ್ರಮುಖರಾದ ನೆರವಂಡ ಉಮೇಶ್ ಅವರು ಮಾತನಾಡಿ ಅರಣ್ಯ ಇಲಾಖೆ ಅಧಿಕಾರಿಗಳು ಸಭೆಗೆ ಆಗಮಿಸಿರುವುದಿಲ್ಲ. ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಪವಿತ್ರ ತೀರ್ಥೋದ್ಭಕ್ಕೆ ಅಗತ್ಯ ವೈದ್ಯರು ಮತ್ತು ಶುಶ್ರೂಷಕರ ನಿಯೋಜನೆ, ಆಂಬ್ಯುಲೆನ್ಸ್ ಸೇವೆ ಹಾಗೂ ವೀಲ್‍ಚೇರ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಅಕಾಡೆಮಿಗಳಿಂದ ಸುಗಮ ಸಂಗೀತ ಹಾಗೂ ಕಾವೇರಿ ಮಾತೆ ಕುರಿತು ಭಕ್ತಿ ಗೀತೆಗಳ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿದರು. ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಅಬಕಾರಿ ಅಧಿಕಾರಿಯವರು ಮಾಹಿತಿ ನೀಡಿ ಸ್ಥಳೀಯ ಗ್ರಾ.ಪಂ.ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತದೆ ಎಂದು ಹೇಳಿದರು. ‘ಈ ಕುರಿತು ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಅಕ್ಟೋಬರ್, 17 ರಂದು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗುವುದು ಎಂದು ಹೇಳಿದರು.’ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವನ್ನು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ಆ ನಿಟ್ಟಿನಲ್ಲಿ ಒಂದು ದಿನದ ಮಟ್ಟಿಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಹೇಳಿದರು. ಈ ಬಗ್ಗೆ ಮಾತನಾಡಿದ ಸ್ಥಳೀಯರೊಬ್ಬರು 2 ದಿನದ ಮಟ್ಟಿಗೆ ಜಿಲ್ಲೆಯಾದ್ಯಂತ ಮದ್ಯ, ಮೀನು ಮತ್ತು ಮಾಂಸ ಮಾರಾಟ ನಿಷೇಧ ಮಾಡುವಂತಾಗಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಗ್ರಾ.ಪಂ.ಸದಸ್ಯರಾದ ಹೊಸೂರು ಸತೀಶ್ ಕುಮಾರ್ ಅವರು ಭಾಗಮಂಡಲ ಗ್ರಾ.ಪಂ. ವತಿಯಿಂದ ಸ್ವಚ್ಛತೆಗೆ ಒತ್ತು ನೀಡಲಾಗುವುದು. ಆ ನಿಟ್ಟಿನಲ್ಲಿ ಪ್ರತ್ಯೇಕ ಅನುದಾನ ನೀಡಬೇಕು ಎಂದು ಕೋರಿದರು. ಸ್ಥಳೀಯರೊಬ್ಬರು ಮಾತನಾಡಿ ಹಿಂದೆ ಬ್ರಹ್ಮಗಿರಿ ಬೆಟ್ಟಕ್ಕೆ ತೆರಳಲು ಅವಕಾಶ ಇತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸ್ಥಗಿತಗೊಳಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹಿಂದೆ ನಡೆದುಕೊಂಡು ಬಂದಿರುವುದನ್ನು ಬದಲಿಸಲು ಸಾಧ್ಯವಿಲ್ಲ. ಹಿಂದೆ ಆಗಿರುವುದಕ್ಕೆ ನಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಹೇಳಿದರು. ತಲಕಾವೇರಿಯ ಅರ್ಚಕರು ಮಾತನಾಡಿ ತಲಕಾವೇರಿಯಲ್ಲಿ ಚಳಿ, ಗಾಳಿ ಮಳೆಯ ನಡುವೆ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಶೆಲ್ಟರ್ ನಿರ್ಮಾಣ ಹಾಗೂ ಉಳಿದುಕೊಳ್ಳಲು ತಾತ್ಕಾಲಿಕ ವ್ಯವಸ್ಥೆ ಮಾಡಬೇಕು ಎಂದು ಕೋರಿದರು. ಇದಕ್ಕೆ ಧ್ವನಿಗೂಡಿಸಿದ ಬಿ.ಎಸ್.ತಮ್ಮಯ್ಯ ಅವರು ಅರ್ಚಕರಿಗೆ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಈ ಕುರಿತು ಮಾತನಾಡಿದ ಕೋಡಿ ಮೋಟಯ್ಯ ಅವರು ಅರ್ಚಕರ ವಾಸ್ತವ್ಯ ಹಾಗೂ ವಿಶ್ರಾಂತಿಗೆ ಅವಕಾಶ ಮಾಡಬೇಕು ಎಂದರು. ಸ್ಥಳೀಯರಾದ ಕೀರ್ತಿಕುಮಾರ್ ಅವರು ಮಾತನಾಡಿ ಭಾಗಮಂಡಲ-ತಲಕಾವೇರಿಯಲ್ಲಿ ಬಿಎಸ್‍ಎನ್‍ಎಲ್ ದೂರವಾಣಿ ನೆಟ್‍ವರ್ಕ್ ಸಮಸ್ಯೆ ಇದ್ದು, ಇದರ ನಿರ್ವಹಣೆ ಆಗಬೇಕು ಎಂದು ಕೋರಿದರು. ಪ್ರಮುಖರಾದ ಎಂ.ಬಿ.ದೇವಯ್ಯ ಅವರು ತಲಕಾವೇರಿಯಲ್ಲಿನ ದೇವಾಲಯದ ಬಗ್ಗೆ ಹಲವು ವಿಷಯಗಳ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಎ.ಎಸ್.ಪೊನ್ನಣ್ಣ ಅವರು ನವೆಂಬರ್ ತಿಂಗಳಲ್ಲಿ ಸಭೆ ಆಹ್ವಾನಿಸಲಾಗುವುದು ಎಂದು ಹೇಳಿದರು. ಸ್ಥಳೀಯರಾದ ಪ್ರಮೋದ್, ಸುನಿಲ್ ಪತ್ರಾವೋ ಪ್ರಮುಖರಾದ ತೆನ್ನೀರ ಮೈನಾ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಗ್ರಾ.ಪಂ.ಉಪಾಧ್ಯಕ್ಷರಾದ ಗಂಗಮ್ಮ,, ಉಪ ವಿಭಾಗಾಧಿಕಾರಿ ನಿತಿನ್, ಬಳ್ಳಡ್ಕ ಅಪ್ಪಾಜಿ, ತಹಶೀಲ್ದಾರ್ ಶ್ರೀಧರ, ತಾ.ಪಂ.ಇಒ ಶೇಖರ್, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಇಒ ಚಂದ್ರಶೇಖರ್ ಇತರರು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.18 NEWS DESK : ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ವತಿಯಿಂದ ಯಡೂರಿನ ಬಿಟಿಸಿಜಿ ಕಾಲೇಜು ಮೈದಾನದಲ್ಲಿ…

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.