ಕಾರ್ಕಳ ಸೆ.17 NEWS DESK : ಉಡುಪಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಡುಪಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಶಿರ್ವ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲ್ಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯಾರಾದ ಮಾನಸ ವಿನಾಯಕ್, ಹರ್ಷಿತ ವಿನಾಯಕ್, ಆದ್ಯ ಎಸ್.ಪಡ್ರೆ, ಆರುಷಿ, ಪೂರ್ವಿ ಎಸ್.ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.










