
ಬೆಂಗಳೂರು ಸೆ.17 NEWS DESK : ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿದರು. ಈ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಡಿ. ಸುಧಾಕರ್, ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ.ಅಜಯ್ ಸಿಂಗ್ ಉಪಸ್ಥಿತರಿದ್ದರು.











