Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ ಆಚರಣೆ : ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಮೌಲ್ಯಯುತವಾಗಿ ಬಳಸಿಕೊಳ್ಳಿ : ವಿನೋದ್ ಕುಮಾರ್
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ ಆಚರಣೆ : ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಮೌಲ್ಯಯುತವಾಗಿ ಬಳಸಿಕೊಳ್ಳಿ : ವಿನೋದ್ ಕುಮಾರ್

ಸೆಪ್ಟೆಂಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಸೆ.17 NEWS DESK : ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಮೌಲ್ಯಯುತವಾಗಿ ಬಳಸಿಕೊಂಡರೆ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಬಹುದು ಎಂದು ಜಗತ್ತಿಗೆ ತಿಳಿಸಿಕೊಟ್ಟ ಸರ್.ಎಂ.ವಿಶ್ವೇಶ್ವರಯ್ಯನವರ ಜೀವನವು ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಪರವಾನಿಗೆ ಪಡೆದ ಭೂಮಾಪಕ ವಿನೋದ್ ಕುಮಾರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು. ಸಿವಿಲ್ ಇಂಜಿನಿಯರಿಂಗ್ ಮುಗಿಸಿದವರಿಗೆ ಸಾಕಷ್ಟು ಸರಕಾರಿ ಕೆಲಸಗಳು ಲಭ್ಯವಿದೆ, ಇದಕ್ಕಾಗಿ ಒಂದಷ್ಟು ಪೂರ್ವ ತಯಾರಿಯ ಅಗತ್ಯವಿದೆ ಎಂದರು. ಯಾವುದೇ ಕೆಲಸ ಮಾಡುವಾಗ ತಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಬೇಕು, ದಿನದಿಂದ ದಿನಕ್ಕೆ ಬದಲಾಗುವ ತಂತ್ರಜ್ಞಾನವನ್ನು ಇಂಜಿನಿಯರುಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ಸಮಾಜದ ಉನ್ನತಿಗೆ ಮತ್ತು ರಾಷ್ಟ್ರದ ಏಳಿಗೆಗೆ ಶ್ರಮಿಸಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಮೂಲಸೌಕರ್ಯದಿಂದ ಹಿಡಿದು ತಂತ್ರಜ್ಞಾನದ ಪ್ರಗತಿಗಳವರೆಗೆ ಇಂಜಿನಿಯರುಗಳ ಕೊಡುಗೆ ಅಪಾರವಾದದ್ದು, ಪ್ರತಿಯೊಂದು ವಿಭಾಗದಲ್ಲಿಯೂ ತಾಂಡವವಾಡುತ್ತಿರುವ ಭ್ರಷ್ಟಾಚಾರದ ಮುಂದೆ ಸರ್.ಎಂ.ವಿಶ್ವೇಶ್ವರಯ್ಯನವರ ದಣಿವರಿಯದ ನಿಸ್ವಾರ್ಥ ದುಡಿಮೆಯು ನಮಗೆಲ್ಲರಿಗೂ ದಾರಿದೀಪವಾಗಬಲ್ಲದು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ಉತ್ತಮವಾದ ಕಾರ್ಯಯೋಜನೆಯನ್ನು ತಯಾರಿಸಿ ಅದನ್ನು ಸರಿಯಾಗಿ ಅನುಷ್ಠಾನಗೊಳಿಸುವವನು ಮಾತ್ರ ಶ್ರೇಷ್ಟ ಇಂಜಿನಿಯರ್ ಆಗಬಲ್ಲ ಎಂದರು. ಸರ್.ಎಂ.ವಿ ಯವರು ದೇಶ ಕಂಡ ಅಪ್ರತಿಮ ಸಿವಿಲ್ ಇಂಜಿನಿಯರ್ ಆದರೂ ಬೇರೆಲ್ಲಾ ಕ್ಷೇತ್ರಗಳಲ್ಲೂ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಹಾಗಾಗಿ ಇಂಜಿನಿಯರ್ಸ್ ಡೇಯಲ್ಲಿ ಪ್ರತಿಯೊಬ್ಬ ಇಂಜಿನಿಯರ್ ಸಹಾ ಭಾಗವಹಿಸಿ ಅವರ ಶ್ರೇಷ್ಟತೆಯನ್ನು ಕೊಂಡಾಡುವುದರ ಜತೆಯಲ್ಲಿ ಅವರ ಸರಳತೆ, ಕನಿಷ್ಟವಾದ ಜೀವನ ಶೈಲಿ ಮತ್ತು ದೇಶಕ್ಕಾಗಿ ದುಡಿಯುವ ತುಡಿತ ಇವುಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಮುಖ್ಯಸ್ಥ ವಿಖ್ಯಾತ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ ಸ್ವಾಗತಿಸಿದರು. ಪ್ರೊ.ಸ್ಮಿತಾ ವಿಶ್ವೇಶ್ವರಯ್ಯನವರ ಸಾಧನೆಯ ಬಗ್ಗೆ ಮಾಹಿತಿ ನೀಡಿದರು. ಪವನ್‍ರಾಜ್ ವಂದಿಸಿ, ವಿದ್ಯಾರಣ್ಯ ಹಾಗೂ ಗೌತಮಿ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.