Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದಶ ದೇವಾಲಯಗಳಿಗೆ ಸಂಸದ ಯದುವೀರ್ ಭೇಟಿ : ಧ್ವನಿವರ್ಧಕ ಬಳಕೆಗೆ ನಿಯಮ ಸಡಿಲಿಸಲು ದಶಮಂಟಪ ಸಮಿತಿ ಮನವಿ*
ಇತ್ತೀಚಿನ ಸುದ್ದಿಗಳು

*ದಶ ದೇವಾಲಯಗಳಿಗೆ ಸಂಸದ ಯದುವೀರ್ ಭೇಟಿ : ಧ್ವನಿವರ್ಧಕ ಬಳಕೆಗೆ ನಿಯಮ ಸಡಿಲಿಸಲು ದಶಮಂಟಪ ಸಮಿತಿ ಮನವಿ*

September 18, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.18 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯ ಸಂದರ್ಭ ಅಗತ್ಯ ಧ್ವನಿವರ್ಧಕಗಳನ್ನು ಬಳಸಲು ನಿಯಮಗಳನ್ನು ಸಡಿಲಿಸಬೇಕು ಮತ್ತು ಈ ಕುರಿತು ಅವಕಾಶ ನೀಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿ ಮಡಿಕೇರಿ ದಸರಾ ದಶಮಂಟಪ ಸಮಿತಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರಿಗೆ ಮನವಿ ಸಲ್ಲಿದೆ. ಸಂಸದರು ಇಂದು ನಗರದ ದಶ ದೇವಾಲಯಗಳಿಗೆ ಭೇಟಿ ನೀಡಿ ದಸರಾ ಆಚರಣೆಯ ಕುರಿತು ದಸರಾ ಸಮಿತಿ ಮತ್ತು ದಶಮಂಟಪ ಸಮಿತಿಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭ ಮನವಿ ಪತ್ರ ಸಲ್ಲಿಸಿದ ದಶ ಮಂಟಪ ಸಮಿತಿಯ ಪ್ರಮುಖರು ಮಡಿಕೇರಿ ದಸರಾ ಜನೋತ್ಸವ ಮೈಸೂರು ದಸರಾದಂತೆಯೇ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಮತ್ತು ನಗರ ಸಂಚಾರ ಭಕ್ತಿಪೂರ್ವಕವಾಗಿ ನಡೆಯುತ್ತದೆ. ವಿಜಯದಶಮಿಯಂದು ದಶಮಂಟಪಗಳ ಶೋಭಾಯಾತ್ರೆ ಜನಾಕರ್ಷಣೆಯನ್ನು ಪಡೆದುಕೊಳ್ಳುತ್ತದೆ. ಪ್ರತಿ ಮಂಟಪವನ್ನು ತಯಾರಿಸಲು ಸುಮಾರು 25ರಿಂದ 30ಲಕ್ಷ ರೂ.ಗಳಷ್ಟು ಖರ್ಚು ಮಾಡಲಾಗುತ್ತಿದೆ. ಆದರೆ ಮಂಟಪಗಳ ಶೋಭಾಯಾತ್ರೆಯ ಸಂದರ್ಭ ಧ್ವನಿವರ್ಧಕಗಳನ್ನು ಬಳಸಲು ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿದೆ. ಮಂಟಪಗಳಲ್ಲಿ ಕಥಾ ಸಾರಾಂಶವನ್ನು ಪ್ರದರ್ಶಿಸುವಾಗ ಜೀವಕಳೆ ಬರಬೇಕಾದರೆ ಮತ್ತು ಆಕರ್ಷಣೆ ಹೆಚ್ಚಬೇಕಾದರೆ ಧ್ವನಿವರ್ಧಕದ ಬಳಕೆ ಅಗತ್ಯವಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಂಟಪ ಸಮಿತಿಗಳ ಸದಸ್ಯರು ಕಾಳಜಿ ತೋರಲಿದ್ದಾರೆ. ಆದ್ದರಿಂದ ನಿಯಮಗಳನ್ನು ಸಡಿಲಿಸಿ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಬೇಕೆಂದು ಸಮಿತಿಯ ಪ್ರಮುಖರು ಸಂಸದರಲ್ಲಿ ಮನವಿ ಮಾಡಿದರು. ಅದ್ದೂರಿ ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ ಸಂಸದ ಯದುವೀರ್ ಅವರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ವಿವಿಧ ದೇವಾಲಯ ಸಮಿತಿಗಳು ಸಂಸದರನ್ನು ಸನ್ಮಾನಿಸಿ ಗೌರವಿಸಿದವು. ಈ ಸಂದರ್ಭ ದಶಮಂಟಪ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಹಾಗೂ ಎಲ್ಲಾ 10 ದೇವಾಲಯ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸೆ.24 ರಂದು ಕಾಫಿ ದಸರಾ ಸಂಭ್ರಮ : ಕಾಫಿ ಕೃಷಿ ಮಾಹಿತಿ, ಸಾಧಕರಿಗೆ ಸನ್ಮಾನ, ಖಾದ್ಯಗಳ ಸ್ಪಧೆ೯, ಕಾಫಿ ಘಮಲಿನ ಮಳಿಗೆಗಳ ಆಕಷ೯ಣೆ*
Next Article *ಸೆ.21 ರಂದು ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಮಹಾಸಭೆ*

Related Posts

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

ಕಣಿವೆ NEWS DESK ಫೆ.12 : ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ…

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.