Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪೂಜಾ ಕಾರ್ಯಕ್ರಮಗಳು ಹಾಗೂ ಕರಗ ಸಂಚರಿಸುವ ಮಾರ್ಗ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪೂಜಾ ಕಾರ್ಯಕ್ರಮಗಳು ಹಾಗೂ ಕರಗ ಸಂಚರಿಸುವ ಮಾರ್ಗ*

ಸೆಪ್ಟೆಂಬರ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.18 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಕರಗ ಉತ್ಸವವು ಸೆ.22 ರಿಂದ ಆರಂಭವಾಗಲಿದ್ದು, ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಸೋಮವಾರ ಬೆಳಿಗ್ಗೆ 8.30 ಗಂಟೆಗೆ ದೇವಾಲಯದಲ್ಲಿ ಗಣಪತಿ ಹೋಮ ಹಾಗೂ ನವರಾತ್ರಿ ಕೊನೆಗೊಳ್ಳುವ ತನಕ ದೇವಾಲಯದ ಟ್ರಸ್ಟ್ ಮತ್ತು ದಾನಿಗಳ ಸಹಕಾರದಿಂದ ಮಧ್ಯಾಹ್ನ 1 ಗಂಟೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಲಿದೆ. ಮಧ್ಯಾಹ್ನ 2 ಗಂಟೆಗೆ ಕರಗ ಕಟ್ಟಿ ಅಲಂಕರಿಸಲ್ಪಡುವ ಸ್ಥಳವಾದ ಪಂಪಿನ ಕೆರೆಗೆ ಕರಗ ತೆರಳಲಿದೆ. :: ಪೂಜಾ ಕಾರ್ಯಕ್ರಮಗಳು ಹಾಗೂ ಕರಗ ಸಂಚರಿಸುವ ಮಾರ್ಗ :: ಸೆ.22 ರಂದು ಸಂಜೆ 5 ಗಂಟೆಗೆ ಸಾಂಪ್ರದಾಯಿಕ ಪೂಜಾ ವಿಧಿ-ವಿಧಾನಗಳೊಂದಿಗೆ ಅಲಂಕೃತ ಕರಗವನ್ನು ಮೆರವಣಿಗೆ ಮೂಲಕ ಮಡಿಕೇರಿಯ ರಾಜಬೀದಿ ಮಾರ್ಗವಾಗಿ ಮಹದೇವಪೇಟೆ ಶ್ರೀ ಚೌಡೇಶ್ವರಿ ದೇವಾಲಯ ಹಾಗೂ ಕಾಲೇಜು ರಸ್ತೆಯ ಪೇಟೆ ಶ್ರೀ ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿ ದೇವಾಲಯಕ್ಕೆ ಹಿಂತಿರುಗಲಿದೆ. ಸೆ.23 ರಂದು ಬೆಳಿಗ್ಗೆ 11.30ಕ್ಕೆ ಶ್ರೀ ಅಮ್ಮನವರಿಗೆ ನೈವೇದ್ಯ ಪೂಜೆ, ಮಧ್ಯಾಹ್ನ 12.30 ಗಂಟೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ, 1.30 ಗಂಟೆಗೆ ನಗರ ಪ್ರದಕ್ಷಿಣೆಗೆ ದೇವಾಲಯದಿಂದ ಹೊರಟು ಶಾಂತಿನಿಕೇತನ ಮೂಲಕ ಸುದರ್ಶನ ಅತಿಥಿ ಗೃಹದ ಕೆಳಭಾಗ, ಜಯನಗರ ಬಡಾವಣೆ. ಬ್ರಾಹ್ಮಣರ ಬೀದಿ, ಅಶ್ವತ್ಥಕಟ್ಟೆ, ದೇಚೂರು ಮಾರ್ಗವಾಗಿ ದೇಚೂರು ಶ್ರೀ ರಾಮಮಂದಿರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ದೇವಾಲಯಕ್ಕೆ ಹಿಂತಿರುಗಲಿದೆ. ಸೆ.24 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಅಮ್ಮನವರಿಗೆ ನೈವೇದ್ಯ ಪೂಜೆಯ ನಂತರ ಮಧ್ಯಾಹ್ನ 12.30ಕ್ಕೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ, 1.30 ಗಂಟೆಗೆ ದೇವಾಲಯದಿಂದ ಹೊರಟು ಶ್ರೀ ಓಂಕಾರೇಶ್ವರ ದೇವಾಲಯ ಮಾರ್ಗವಾಗಿ ಬಾಹ್ಮಣರ ಬೀದಿ, ದೇಚೂರು, ಜೂನಿಯರ್ ಕಾಲೇಜು ರಸ್ತೆ, ದಾಸವಾಳ ರಸ್ತೆ, ಖಾದಿ ಬಂಡಾರ, ಅಪ್ಪಚ್ಚ ಕವಿ ರಸ್ತೆ, ನಂತರ ಪ್ರಸಾದ್ ಲಾಡ್ಜ್ ಮುಂಭಾಗ, ಕೈಗಾರಿಕಾ ಬಡಾವಣೆ, ಡೈರಿ ಫಾರಂ ರಸ್ತೆ, ರಿಮ್ಯಾಂಡ್ ಹೋಂ ಹಿಂಭಾಗ, ಎಲ್.ಐ.ಸಿ. ಕಛೇರಿ, ರೇಸ್‍ಕೋರ್ಸ್ ರಸ್ತೆಗಾಗಿ ಹಿಂತಿರುಗಲಿದೆ.
ಸೆ.25 ರಂದು ದೇವಾಲಯದಲ್ಲಿ ಕರಗಕ್ಕೆ ವಿಶೇಷ ಪೂಜೆ ನಡೆಯಲಿದೆ. ಮಧ್ಯಾಹ್ನ 1.30 ಗಂಟೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ. ಸೆ.26 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಅಮ್ಮನವರಿಗೆ ನೈವೇದ್ಯ ಪೂಜೆ, ಮಧ್ಯಾಹ್ನ 12.30ಕ್ಕೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ, 1.30 ಗಂಟೆಗೆ ದೇವಾಲಯದಿಂದ ಹೊರಟು ಪೆನ್ಷನ್ ಲೇನ್, ಹೊಟೇಲ್ ರಾಜದರ್ಶನ್ ಹಿಂಭಾಗದ ಮುನೀಶ್ವರ ದೇವಾಲಯ, ಶ್ರೀ ಪ್ರಸನ್ನ ಗಣಪತಿ ದೇವಾಲಯ, ಹೊಸ ಬಡಾವಣೆ, ಗೌಳಿಬೀದಿ ಮಾರ್ಗವಾಗಿ ದೇವಾಲಯಕ್ಕೆ ಹಿಂತಿರುಗಲಿದೆ.
ನವರಾತ್ರಿಯವರೆಗೆ ದೇವಾಲಯದಲ್ಲಿ ಮಧ್ಯಾಹ್ನ 12.30 ಗಂಟೆಗೆ ಶ್ರೀ ಅಮ್ಮನವರಿಗೆ ನೈವೇದ್ಯ ಪೂಜೆ, ಮಧ್ಯಾಹ್ನ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಹಾಗೂ ರಾತ್ರಿ 8.30ರ ವರೆಗೆ ದೇವಾಲಯದಲ್ಲಿ ವಿಶೇಷ ಪೂಜಾ ವಿಧಿ-ವಿಧಾನಗಳು ನಡೆಯಲಿದೆ. ಅ.1 ರಂದು ಆಯುಧ ಪೂಜೆಯ ಪ್ರಯುಕ್ತ ಬೆಳಿಗ್ಗೆ 6 ಗಂಟೆಯಿಂದ ಸಂಜೆ 8.30 ಗಂಟೆಯವರೆಗೆ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ ಮತ್ತು ವಾಹನ ಪೂಜೆ ಜರುಗಲಿದೆ. ಅ.2 ರಂದು ನವರಾತ್ರಿಯ ದಿನದಂದು ರಾತ್ರಿ 12 ಗಂಟೆಗೆ ಅಲಂಕೃತ ಕರಗದೊಂದಿಗೆ ಶ್ರೀ ದಂಡಿನ ಮಾರಿಯಮ್ಮ ದೇವಾಲಯಕ್ಕೆ ತೆರಳಿ ನಾಲ್ಕು ಶಕ್ತಿ ದೇವತೆ ಕರಗಗಳು ಎಲ್ಲಾ ದಶ ಮಂಟಪಗಳಿಗೆ ಪೂಜೆ ಸಲ್ಲಿಸಿ, ಬನ್ನಿ ಮಂಟಪಕ್ಕೆ ತೆರಳಿ ಬನ್ನಿ ಕಡಿದು ದೇವಾಲಯಕ್ಕೆ ಹಿಂತಿರುಗಲಿದೆ.  ನಂತರ ಮೂರನೆಯ ದಿನವಾದ ಅ.4 ರಂದು ಸಂಜೆ ಕರಗಕ್ಕೆ ಸಂಬಂಧಿಸಿದಂತೆ “ಕುಂಭ ಪೂಜೆ” ನಡೆಯುವುದರೊಂದಿಗೆ ಈ ವರ್ಷದ ನವರಾತ್ರಿ ಉತ್ಸವ ಸಂಪನ್ನಗೊಳ್ಳಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಮಾ.18 : ಜಮೀನು ತೆರವು ಕಾರ್ಯಾಚರಣೆ ಸಂದರ್ಭ ಅರಣ್ಯಾಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ…

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.