Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರ್ನಾಡಿನಲ್ಲಿ ಸಿಎನ್‍ಸಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ : ಅಕ್ರಮ ವಲಸಿಗರಿಂದ ಕಾನೂನು ಉಲ್ಲಂಘನೆಯಾದರೆ ಜಿಲ್ಲಾಡಳಿತವೇ ನೇರ ಹೊಣೆ : ಎನ್.ಯು.ನಾಚಪ್ಪ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರ್ನಾಡಿನಲ್ಲಿ ಸಿಎನ್‍ಸಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ : ಅಕ್ರಮ ವಲಸಿಗರಿಂದ ಕಾನೂನು ಉಲ್ಲಂಘನೆಯಾದರೆ ಜಿಲ್ಲಾಡಳಿತವೇ ನೇರ ಹೊಣೆ : ಎನ್.ಯು.ನಾಚಪ್ಪ ಎಚ್ಚರಿಕೆ*

ಸೆಪ್ಟೆಂಬರ್ 18, 20257 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.18 NEWS DESK : ಬಾಂಗ್ಲಾದೇಶಿಗರು, ರೋಹಿಂಗ್ಯಗಳು, ಜಾರ್ಖಂಡ್, ಅಸ್ಸಾಂ ಮತ್ತು ಮಧ್ಯಪ್ರದೇಶದ ಅಕ್ರಮ ವಲಸಿಗರು ಕೊಡಗು ಜಿಲ್ಲೆಯಲ್ಲಿ ಕಾರ್ಮಿಕರ ರೂಪದಲ್ಲಿ ಆಶ್ರಯ ಪಡೆದಿದ್ದಾರೆ. ಜಾತಿ ಜನಗಣತಿಯ ಸಂದರ್ಭ ಇವರುಗಳನ್ನು ಸಕ್ರಮಗೊಳಿಸಿದರೆ ಮತ್ತು ಇವರುಗಳಿಂದ ಕಾನೂನು ಉಲ್ಲಂಘನೆಯಾದರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಎಚ್ಚರಿಕೆ ನೀಡಿದ್ದಾರೆ. ಜಾತಿ ಜನಗಣತಿಯ ಸಂದರ್ಭ ಕೊಡವರು ಜಾತಿ-ಭಾಷೆ-ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆನ್ನುವ ಕುರಿತು ಮತ್ತು ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮೂರ್ನಾಡಿನಲ್ಲಿ ನಡೆಸಿದ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಸರಕಾರದ ವತಿಯಿಂದ ಇದೇ ಸೆ.22 ರಿಂದ ಅ.7ರ ವರೆಗೆ ನಡೆಯಲಿರುವ ಜಾತಿವಾರು ಗಣತಿಯ ಸಂದರ್ಭ ಜಾತಿ-ಭಾಷೆ-ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ಬರೆಸುವ ಮೂಲಕ ಆ್ಯನಿಮಿಸ್ಟಿಕ್ ಏಕ-ಜನಾಂಗೀಯ ಆದಿಮಸಂಜಾತ ಕೊಡವರ ಸಮಗ್ರ ಸಬಲೀಕರಣಕ್ಕೆ ಕೊಡವರು ಕಟಿಬದ್ಧರಾಗಿರಬೇಕು ಎಂದು ಕರೆ ನೀಡಿದರು. 1980ರ ದಶಕದಲ್ಲಿ ಕುಖ್ಯಾತಿ ಪಡೆದಿದ್ದ ಬೆಂಗಳೂರು- ಆಂಧ್ರ ಗ್ರಾಮಾಂತರ ಗಡಿಭಾಗದ “ದಂಡುಪಾಳ್ಯ” ಮಾದರಿಯಲ್ಲಿ ಮತ್ತು ಮಧ್ಯಪ್ರದೇಶದ ದಾರ್ ಜಿಲ್ಲೆಯ ತಾಂಡ ಪ್ರದೇಶದ ತಾಂಡ ಗ್ಯಾಂಗ್ ರೀತಿಯಲ್ಲಿ ಕಳ್ಳತನ ಪ್ರಕರಣಗಳು ಜಿಲ್ಲೆಯಲ್ಲಿ ನಡೆಯುತ್ತಿದೆ. ಬಾಂಗ್ಲಾದೇಶಿಗರು, ರೋಹಿಂಗ್ಯಗಳು, ಜಾರ್ಖಂಡ್, ಅಸ್ಸಾಂ ಮತ್ತು ಮಧ್ಯಪ್ರದೇಶದ ಅಕ್ರಮ ವಲಸಿಗರು ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಮಡಿಕೇರಿಯ ಪೊಲೀಸ್ ವಸತಿ ಗೃಹಕ್ಕೇ ನುಗ್ಗಿ ಕಳ್ಳತನ ನಡೆಸಿದ ಮಧ್ಯಪ್ರದೇಶದ ದಾರ್ ಜಿಲ್ಲೆಯ ತಾಂಡ ಪ್ರದೇಶದ ತಂಡವನ್ನು ಕೊಡಗು ಪೊಲೀಸರು ಸೆರೆ ಹಿಡಿದ್ದಿದ್ದರೂ, ಜಿಲ್ಲೆಯಲ್ಲೇ ಆಶ್ರಯ ಪಡೆದಿರುವ ಅಕ್ರಮ ವಲಸಿಗರಿಂದ ಆತಂಕವಿದೆ ಎಂದು ಎನ್.ಯು.ನಾಚಪ್ಪ ಗಮನ ಸೆಳೆದರು. ಈಗಾಗಲೇ ಜಾತಿವಾರು ಜನಗಣತಿಯಲ್ಲಿ ಪ್ರತಿಕುಟುಂಬಗಳ ಮಾಹಿತಿ ದಾಖಲಿಸುವ ಕೆಲಸವನ್ನು ವಿದ್ಯುತ್ ಇಲಾಖೆ ಮಾಡುತ್ತಿದೆ. ಎಲ್ಲಾ ಮನೆಗಳ ವಿದ್ಯುತ್ ಮೀಟರ್ ಗಳನ್ನು ಅನುಸರಿಸಿ ಜಿಯೋ ಟ್ಯಾಗಿಂಗ್ ಗಾಗಿ ಸ್ಟಿಕರ್ ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಅಕ್ರಮ ವಲಸಿಗರು ನೆಲೆಸಿರುವ ಬಾಡಿಗೆ ಮನೆ ಮತ್ತು ಲೈನ್ ಮನೆಗಳಿಗೆ ಕೂಡ ಸ್ಟಿಕರ್ ಅಳವಡಿಸಲಾಗಿದೆ. ಇದನ್ನು ಆಧರಿಸಿ ಜನಗಣತಿ ಮಾಹಿತಿದಾರರು ಸಹಜವಾಗಿಯೇ ಅಕ್ರಮ ವಲಸಿಗ ಕುಟುಂಬಗಳ ಮಾಹಿತಿಯನ್ನು ಕೂಡ ಕಲೆ ಹಾಕಲಿದ್ದಾರೆ. ಈ ಸಂದರ್ಭ ಅಕ್ರಮ ವಲಸಿಗರು ಸಕ್ರಮಗೊಳ್ಳುವ ಅಥವಾ ಅಧಿಕೃತ ನಿವಾಸಿಗಳೆಂದು ಘೋಷಿಸಲ್ಪಡುವ ಅಪಾಯವಿದ್ದು, ಕೊಡವರು ಜಾಗೃತರಾಗಬೇಕಾಗಿದೆ. ಒಂದು ವೇಳೆ ಕಾನೂನು ಮೀರಿ ಅಕ್ರಮ ವಲಸಿಗರು ಸ್ಥಳೀಯ ನಿವಾಸಿಗಳೆಂದು ಘೋಷಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಜಿಲ್ಲಾಡಳಿತವೇ ಇದಕ್ಕೆ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಟರ್ಕಿ ದೇಶದ ಕಾರ್ಮಿಕರಿಗೆ ಪ್ಯಾರಿಸ್‌ನಲ್ಲಿ ಗೆಸ್ಟ್ ವರ್ಕರ್ ಪರ್ಮಿಟ್ ನೀಡಿದಂತೆ ಕೊಡಗಿನಲ್ಲೂ ಕಾರ್ಮಿಕ ಸಮಸ್ಯೆಯನ್ನು ನೀಗಿಸಲು ವಲಸಿಗ ಕಾರ್ಮಿಕರಿಗೆ ಗೆಸ್ಟ್ ವರ್ಕರ್ ಪರ್ಮಿಟ್ ನೀಡಬೇಕು. ವಾರ್ಷಿಕ ಕೆಲಸ ಮುಗಿದ ನಂತರ ಅವರ ರಾಜ್ಯ ಅಥವಾ ದೇಶಕ್ಕೆ ಹಿಂದಿರುಗಬೇಕು. ಮತ್ತೆ ಬರಬೇಕಾದರೆ ವರ್ಕ್ ಪರ್ಮಿಟ್ ನವೀಕರಣಗೊಳಿಸುವ ಪದ್ಧತಿ ಜಾರಿಗೆ ತರಬೇಕು. ಆ ಮೂಲಕ ಜನಸಂಖ್ಯೆ ಪಲ್ಲಟಕ್ಕೆ ತಡೆ ಹಾಕಬೇಕು. 2015ರಲ್ಲಿ ನರೇಂದ್ರ ಮೋದಿ-ಶೇಕ್ ಅಸಿನಾ ಒಪ್ಪಂದ ಡಾಕ ದಲ್ಲಿ ನಡೆದಾಗ ಅದರ ಮೂಲ ತಿರುಳೆ ಈ ಗೆಸ್ಟ್ ವರ್ಕರ್ ರ‍್ಮಿಟ್ ಆಗಿತ್ತು. ಕೊಡಗಿನಲ್ಲಿಯೂ ಅದನ್ನು ಮುಂದುವರೆಸಬೇಕು. ಆದರೆ ದುರುಳ ರಾಜಕರಣಿಗಳು-ಮಧ್ಯವರ್ತಿಗಳು ಹಾಗೂ ಭ್ರಷ್ಟ ಅಧಿಕಾರಿಗಳ ಅಕ್ರಮ ಕೂಟಕ್ಕೆ ಓಟ್ ಬ್ಯಾಂಕ್ ಸೃಷ್ಟಿ, ಭೂಮಿ ಕಬ್ಜ ಮತ್ತು ಮರ ಹನನ ಮುಖ್ಯ ಗುರಿಯಾಗಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಅಕ್ರಮ ವಲಸಿಗರಿಗೆ ಆಶ್ರಯ ಕಲ್ಪಿಸುವ ಏಕೈಕ ಉದ್ದೇಶದಿಂದ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಲಾಗುತ್ತಿದ್ದು, ದೊಡ್ಡ ಜಾಲವೊಂದು ಕಾರ್ಯಾಚರಿಸುತ್ತಿದೆ. ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳು ಕಾನೂನು ಬಾಹಿರವಾಗಿ ಕೊಡವ ಲ್ಯಾಂಡ್ ನಲ್ಲಿ ಆಶ್ರಯ ಪಡೆದು ತಮ್ಮ ಇರುವಿಕೆಯನ್ನು ಸಕ್ರಮಗೊಳಿಸಿಕೊಳ್ಳಲು ಮುಂದಾಗಿರುವುದು, ಸರಕಾರಿ ಯಂತ್ರಗಳು ಆಶ್ರಯ ನೀಡಲು ಹವಣಿಸುತ್ತಿರುವುದು ಮತ್ತು ದೊಡ್ಡ ದೊಡ್ಡ ಕಂಪೆನಿಗಳು ಬೆಂಬಲಕ್ಕೆ ನಿಂತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಸಿದ್ದಾಪುರದಲ್ಲಿ ಸುಮಾರು 6 ಸಾವಿರ, ಹಾಲುಗುಂದ (ಪಾಲಂದ) ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 5 ಸಾವಿರ, ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಸುಮಾರು 3 ಸಾವಿರ, ತಿತಿಮತಿ ವ್ಯಾಪ್ತಿಯಲ್ಲಿ 2 ಸಾವಿರ ಮತ್ತು ನಾಪೋಕ್ಲು ವಿಭಾಗದಲ್ಲಿ ಸುಮಾರು 9 ಸಾವಿರ ಬಾಂಗ್ಲಾ ಹಾಗೂ ರೋಹಿಂಗ್ಯ ಕುಟುಂಬಗಳು ಅಕ್ರಮವಾಗಿ ವಾಸಿಸುತ್ತಿರುವ ಕುರಿತು ಸಂಶಯವಿದೆ. ಇವರನ್ನೆಲ್ಲ ಗಿರಿಜನ ಮತ್ತು ಅಲ್ಪಸಂಖ್ಯಾತರ ರೂಪದಲ್ಲಿ ಪರಕಾಯ ಪ್ರವೇಶ ಮಾಡಿಸಿ ರೇಷನ್ ಕಾರ್ಡ್, ಪಾನ್ ಕಾರ್ಡ್, ಆಧಾರ್ ಕಾರ್ಡ್ ಮೂಲಕ ಮತದಾರರ ಪಟ್ಟಿಯಲ್ಲಿ ಸೇರಿಸಿ ಖಾಯಂ ವಿಳಾಸದಾರರನ್ನಾಗಿ ಮಾಡುವ ಸಂಚು ನಡೆದಿದೆ.
ನಕಲಿ ಆಧಾರ್ ಮತ್ತು ಐಡಿ ಕಾರ್ಡ್ ನೀಡುವ ಜಾಲ ಕಳೆದ ಎರಡು ವರ್ಷಗಳಿಂದ ಚಟುವಟಿಕೆಯಿಂದ ಇದ್ದು, ಈ ನಕಲಿ ಆಧಾರ್ ಕಾರ್ಡ್ನ್ನೇ ಬಳಸಿ ಅಕ್ರಮ ವಲಸಿಗರು ಕೊಡಗು ಮಾತ್ರವಲ್ಲದೆ ಹೊರ ಭಾಗದಲ್ಲೂ ತೋಟದ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಕೊಡವ ಲ್ಯಾಂಡ್ ನ ಪ್ರತೀ ಗ್ರಾಮಗಳಲ್ಲಿ ಅವರದ್ದೇ ಆದ ಮಾರುಕಟ್ಟೆ, ಮನಿಚೈನ್, ಬಡ್ಡಿದಂಧೆ, ಗೋವು ಕಳ್ಳತನ, ಹಲ್ಲೆ, ಸುಲಿಗೆ, ಕಾಫಿ, ಕಾಳು ಮೆಣಸು ಕಳ್ಳತನ, ಕಳ್ಳಬೇಟೆ, ಅಕ್ರಮವಾಗಿ ಕಾವೇರಿ ನದಿಯಿಂದ ವಿದ್ಯುತ್ ತಂತಿ ಬಳಸಿ ಮೀನು ಹಿಡಿಯುವುದು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಭ್ರಷ್ಟ ರಾಜಕಾರಣಿಗಳು ಅಕ್ರಮ ವಲಸಿಗರ ಮಾಹಿತಿ ಕಲೆಹಾಕಿ ಅವರನ್ನೆಲ್ಲ ಮತದಾರರ ಪಟ್ಟಿಯಲ್ಲಿ ಸೇರಿಸಿ ನಿವೇಶನ ಮತ್ತು ವಸತಿ ನೀಡುವ ಭರವಸೆ ನೀಡುತ್ತಿದ್ದು, ಇದಕ್ಕೆ ಆಡಳಿತ ಯಂತ್ರ ಬೆಂಬಲ ನೀಡುತ್ತಿದೆ. ಜಾಗ ಮಂಜೂರು ಮಾಡಿ ಹಕ್ಕುಪತ್ರ ಕೊಡಿಸುವ ಮೂಲಕ ಮತದಾರರ ಸಂಖ್ಯಾಬಲವನ್ನು ಹೆಚ್ಚಿಸಿಕೊಂಡು ಆ ಜನಸಂಖ್ಯೆ ತೂಕದ ಆಧಾರದಲ್ಲಿ ಮುಂದಿನ ಕ್ಷೇತ್ರ ಮರು ವಿಂಗಡಣೆ ಸಂದರ್ಭ ಕೊಡಗಿಗೆ ಪ್ರತ್ಯೇಕ ಪಾರ್ಲಿಮೆಂಟ್ ಸೀಟು ಸಿಗದಂತೆ ಮಾಡುವ ಹುನ್ನಾರ ಅಡಗಿದೆ. ಕೊಡವರ ಬಾಹುಳ್ಯದ ಮೂಲ ನೆಲೆಯಾದ ಪಶ್ಚಿಮಘಟ್ಟದ ಪರ್ವತ ಶ್ರೇಣಿಯ ಸಂಕೋಲೆಗಳಾದ ಮರೆನಾಡಿನಿಂದ ಸೂರ್ಲಬ್ಬಿನಾಡ್ ವರೆಗೆ ಸೂಕ್ಷ್ಮ ಪರಿಸರ ವಲಯದ ಕುರಿತು ಹೈಕೋರ್ಟ್ ಸ್ಪಷ್ಟ ಆದೇಶವಿದ್ದರೂ ಅದನ್ನು ಗಾಳಿಗೆ ತೂರಿ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮ ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳಿಗೆ ಆಶ್ರಯ ಕಲ್ಪಿಸಲು ಷಡ್ಯಂತ್ರ ನಡೆದಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಹಗಲು ರಾತ್ರಿ ಎನ್ನದೆ ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳು ಬೆಂಗಳೂರು-ಮಂಗಳೂರು-ಮೈಸೂರು ಮಾರ್ಗವಾಗಿ ಕೊಡಗನ್ನು ಪ್ರವೇಶಿಸುತ್ತಿದ್ದಾರೆ. ಬಸ್ ಸೇರಿದಂತೆ ಎಲ್ಲಾ ವಾಹನಗಳನ್ನು ಚೆಕ್ ಪೋಸ್ಟ್ನಲ್ಲಿ ತಡೆದು ಶೋಧಿಸಬೇಕು ಮತ್ತು ಮಾಹಿತಿ ಕಲೆ ಹಾಕಬೇಕು. ಈ ಜಾಲದ ಹಿಂದೆ ಯಾರಿದ್ದಾರೆ ಎಂಬುವುದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
*ಕೊಡವ ಎಂದು ನಮೂದಿಸಿ* ಜಾತಿ ಜನಗಣತಿಯಲ್ಲಿ ಉತ್ತಮ ನಾಳೆಗಾಗಿ ಮತ್ತು ಅತ್ಯಂತ ನಗಣ್ಯ ಆ್ಯನಿಮಿಸ್ಟೆಕ್ ಏಕ-ಜನಾಂಗೀಯ ಆದಿಮಸಂಜಾತ ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಜಾತಿ-ಭಾಷೆ, ಭಾಷೆ, ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ನಮೂದಿಸುವಂತೆ ಸಲಹೆ ನೀಡಿದರು. ಕೊಡವರು ಯಾವುದೇ ಪಂಥಗಳು ಅಥವಾ ಉಪಪಂಗಡಗಳಿಲ್ಲದ ಏಕೈಕ, ಏಕ-ಜನಾಂಗೀಯ ಗುಂಪಾಗಿದ್ದು, ವಿಶಿಷ್ಟ ಗುರುತು, ಭಾಷೆ ಮತ್ತು ಸಂಸ್ಕೃತಿಯನ್ನು ಹೊಂದಿರುವ ವಿಭಿನ್ನ ಸಮುದಾಯದವರಾಗಿದ್ದಾರೆ ಎಂದರು. ಕುಟುಂಬ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಕೊಡವರು ಜನಸಂಖ್ಯಾ ನಿಯಂತ್ರಣದ ಮೂಲಕ ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಅಮೋಘ ಕಾಣಿಕೆಯನ್ನು ನೀಡಿದ್ದಾರೆ. ರಾಷ್ಟಿçÃಯ ಭದ್ರತೆಗಾಗಿ ಎರಡು ಜಾಗತಿಕ ಯುದ್ಧಗಳು, ಪಾಕಿಸ್ತಾನದ ವಿರುದ್ಧ ನಾಲ್ಕು ಯುದ್ಧ, ಚೀನಾದ ವಿರುದ್ಧ 1 ಯುದ್ಧ ಮತ್ತು ವಿಶ್ವ ಸಂಸ್ಥೆಯ ಅಸಂಖ್ಯಾತ ಶಾಂತಿ ಪಡೆಗಳಲ್ಲಿ ಭಾಗಿಯಾಗಿ ಹುತಾತ್ಮರಾದ ಕಾರಣ ಕೊಡವರ ಜನಸಂಖ್ಯೆ ಕಡಿಮೆಯಾಗಿದೆ. ರಾಷ್ಟ್ರ ನಿರ್ಮಾಣ ಮತ್ತು ರಾಷ್ಟ್ರೀಯ ಭದ್ರತೆಗಾಗಿ ಜನಸಂಖ್ಯೆಯನ್ನು ಕಳೆದುಕೊಂಡ ಕೊಡವರನ್ನು ಗೌರವಾಧರಗಳಿಂದ ಕಂಡು ಅವರ ನಗಣ್ಯ ಜನಸಂಖ್ಯೆಗೆ “ಸಿಕ್ಕಿಂನ ಸಂಘ ಮತಕ್ಷೇತ್ರದ” ಮಾದರಿಯಲ್ಲಿ ವಿಶೇಷ ಪ್ರಾತಿನಿಧ್ಯವನ್ನು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ನೀಡಬೇಕು ಎಂದು ಒತ್ತಾಯಿಸಿದರು. ಮುಕ್ಕೋಡ್ಲುವಿನ ಆದಿಮಸಂಜಾತ ವೃದ್ಧ ದಂಪತಿಗಳಾದ ಕಾಳಚಂಡ ನಾಣಿಯಪ್ಪ ಅವರ ತೋಟವನ್ನು ನಾಶ ಮಾಡಿ ಅವಮಾನಿಸಿರುವುದು ಅಮಾನವೀಯ ಕೃತ್ಯ ಮತ್ತು ಕ್ರೂರ ವ್ಯಂಗ್ಯವಾಗಿದೆ. ಮೂಲ ನಿವಾಸಿ ಕೊಡವರನ್ನು ಅವರ ಪ್ರಾಚೀನ ನೆಲೆಯಿಂದ ಪಲ್ಲಟಗೊಳಿಸಿ ಖಾಲಿಯಾದ ಆ ಪ್ರದೇಶದಲ್ಲಿ ಅಕ್ರಮ ವಲಸಿಗರಿಗೆ ಆಶ್ರಯ ನೀಡಿ ಓಟ್ ಬ್ಯಾಂಕ್ ಸೃಷ್ಟಿಸಿಕೊಳ್ಳುವ ಹುನ್ನಾರ ನಡೆದಿದೆ. ಇದು ಹೀಗೆ ಪುನರಾವರ್ತನೆಯಾದರೆ ನಾವು ಸಹಿಸಲಾರೆವು ಎಂದು ಎಚ್ಚರಿಕೆ ನೀಡಿದರು. ಸುಮಾರು 1 ಲಕ್ಷ ವಿದೇಶಿಯರು ಅಕ್ರಮವಾಗಿ ಕೊಡವ ಭೂಮಿಯಲ್ಲಿ ನೆಲೆಸಿದ್ದಾರೆ ಎನ್ನುವ ಮಾಹಿತಿ ಇದೆ. ದೊಡ್ಡ ದೊಡ್ಡ ಕಂಪೆನಿ ತೋಟಗಳು ಇದರಲ್ಲಿ ಶಾಮೀಲಾಗಿದ್ದು, ಅವರನ್ನು ಸಂಪರ್ಕಿಸಿರುವ ಆಡಳಿತಾಂಗ ಸಮೃದ್ಧ ಗ್ಯಾರಂಟಿ ಮತಬ್ಯಾಂಕ್ ನಿರ್ಮಿಸಲು ಕಾರಸ್ಥಾನ ರೂಪಿಸಿದೆ. ಇದು ಕೊಡವ ನೆಲದ ಜನಸಂಖ್ಯೆ ಪಲ್ಲಟ ಮತ್ತು ಜನಸಂಖ್ಯಾ ದುರಾಕ್ರಮಣಕ್ಕೆ ಕಾರಣವಾಗಿ ರಾಷ್ಟ್ರೀಯ ಭದ್ರತೆಗೆ ಸವಾಲಾಗಲಿದೆ. ಈ ವಿಪತ್ತಿನಿಂದ ಹೊರ ಬರಬೇಕಾದರೆ ಆದಿಮ ಸಂಜಾತ ಅಖಂಡ ದೇಶ ಪ್ರೇಮಿ ಕೊಡವರ ಹಕ್ಕು ರಕ್ಷಣೆಯಾಗಬೇಕು. ಆ ಹಕ್ಕು ರಕ್ಷಣೆಯ ಖಾತರಿಯಾಗಬೇಕಾದರೆ ಕೊಡವರ ಜನಸಂಖ್ಯಾ ಮಾಹಿತಿಯ ಅನನ್ಯತೆ, ಅದಕ್ಕೆ ಪೂರಕವಾದ “ಕೋಡ್ ಮತ್ತು ಕಲಂ” ಅನ್ನು 2026ರ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿವಾರು ಮಾಹಿತಿ ಕಲೆ ಹಾಕುವ ಸಂದರ್ಭ ಸ್ಪಷ್ಟವಾಗಿ ದಾಖಲಿಸಲ್ಪಡಬೇಕೆಂದು ಎನ್.ಯು.ನಾಚಪ್ಪ ಹೇಳಿದರು.
ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯ ಹಕ್ಕು ಮತ್ತು ಎಸ್‌ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆನ್ನುವ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ವಿವಿಧಡೆ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಸರ್ವ ಕೊಡವರು ಅರಿತುಕೊಳ್ಳಬೇಕು. ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಸಿಎನ್‌ಸಿ ನಡೆಸುವ ಶಾಂತಿಯುತ ಹೋರಾಟಕ್ಕೆ ಕೈಜೋಡಿಸಬೇಕೆಂದು ಎನ್.ಯು.ನಾಚಪ್ಪ ಕರೆ ನೀಡಿದರು. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟç ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುತ್ತಿದೆ ಎಂದು ತಿಳಿಸಿದರು.
ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮವು ಶಾಂತಿಯುತವಾಗಿ ಕೊಡವಲ್ಯಾಂಡ್ ನಾದ್ಯಂತ ನಡೆಯುತ್ತಿದೆ. ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಸಿಎನ್‌ಸಿಯ ಹೋರಾಟದ ಬಲ ಮತ್ತಷ್ಟು ಹೆಚ್ಚಿದೆ ಎಂದರು.
*ಭೂಪರಿವರ್ತನೆಯಿಂದ ಅನಾಹುತ* 2018ರಲ್ಲಿ ಕೊಡವಲ್ಯಾಂಡ್ ನಲ್ಲಿ ವ್ಯಾಪಕ ಜಲಸ್ಫೋಟ ಮತ್ತು ಭೂಸ್ಫೋಟ ಸಂಭವಿಸಿ ಸಾವುನೋವು, ಕಷ್ಟನಷ್ಟಗಳು ಎದುರಾಗಿದ್ದರೂ ಪರಿಸರ ಕಾಳಜಿಯನ್ನು ಬಲಿಕೊಟ್ಟು ಬೃಹತ್ ವಿಲ್ಲಾ ಮತ್ತು ಟೌನ್‌ಶಿಪ್ ಮಾಡಲು ಆಡಳಿತಾಂಗ ಸಂಚು ರೂಪಿಸಿದೆ. ಜಿಲ್ಲಾಡಳಿತ ಎಗ್ಗಿಲ್ಲದೆ ಭೂಪರಿವರ್ತನೆಗೆ ಅವಕಾಶ ನೀಡುತ್ತಿದೆ. ಹೊರಗಿನ ಬಂಡವಾಳಶಾಹಿಗಳು ಕಪ್ಪು ಹಣವನ್ನು ಬಳಸಿ ಭೂಖರೀದಿಯಲ್ಲಿ ತೊಡಗಿದ್ದಾರೆ. ದೊಡ್ಡ ದೊಡ್ಡ ರೆಸಾರ್ಟ್ಗಳು ತಲೆ ಎತ್ತುತ್ತಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತವೇ ಎದುರಾಗುವ ಸಾಧ್ಯತೆಗಳಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಆದಿಮಸಂಜಾತ ಕೊಡವರಿಗೆ ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯೊಂದಿಗೆ ಸ್ವಯಂ ಆಡಳಿತ ಮತ್ತು ಆಂತರಿಕ ಸ್ವಯಂನಿರ್ಣಯದ ಹಕ್ಕನ್ನು ಖಾತ್ರಿ ಪಡಿಸುವುದರಿಂದ ಈ ರೀತಿಯ ಅಕ್ರಮ ಮತ್ತು ಅನಾಹುತಗಳನ್ನು ತಡೆಯಲು ಸಾಧ್ಯವೆಂದು ಅಭಿಪ್ರಾಯಪಟ್ಟರು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸೂರ್ಯ-ಚಂದ್ರ, ಭೂದೇವಿ, ಪ್ರಕೃತಿ ದೇವಿ, ಜಲದೇವಿ, ವನದೇವಿ, ಸಂವಿಧಾನ, ಗುರು ಕಾರೋಣ ಹೆಸರಿನಲ್ಲಿ ಸಿಎನ್‌ಸಿಯ ಕೊಡವಲ್ಯಾಂಡ್ ಹೋರಾಟದೊಂದಿಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ಪ್ರತಿಜ್ಞೆ ಸ್ವೀಕರಿಸಿದರು. ರಾಷ್ಟ್ರಗೀತೆ ಜನ-ಗಣ-ಮನದೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು. *ಸೆ.30 ರಂದು ಬೇಂಗ್ ನಾಡಿನ ಚೇರಂಬಾಣೆಯಲ್ಲಿ ಜನಜಾಗೃತಿ*
ಕೊಡವ ಲ್ಯಾಂಡ್ ಗೆ ಹಾಗೂ ಕೊಡವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಇಲ್ಲಿಯವರೆಗೆ ಬಿರುನಾಣಿ, ಕಡಂಗ, ಟಿ.ಶೆಟ್ಟಿಗೇರಿ, ಕಕ್ಕಬ್ಬೆ, ಬಾಳೆಲೆ, ಪೊನ್ನಂಪೇಟೆ, ನಾಪೋಕ್ಲು, ಮಾದಾಪುರ, ಸುಂಟಿಕೊಪ್ಪ ಮತ್ತು ಸಿದ್ದಾಪುರ, ವಿರಾಜಪೇಟೆ, ಗೋಣಿಕೊಪ್ಪದಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸಿ ಜನಜಾಗೃತಿ ಮೂಡಿಸಲಾಗಿದೆ.
ಸೆ.30 ರಂದು ಬೆಳಿಗ್ಗೆ 10.30 ಗಂಟೆಗೆ ಬೇಂಗ್ ನಾಡಿನ ಚೇರಂಬಾಣೆಯಲ್ಲಿ 14ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ತಿಳಿಸಿದರು. ಬಿದ್ದಂಡ ಉಷಾ ದೇವಮ್ಮ, ಪಾಲಂದೀರ ರೀಟಾ, ಬಿದ್ದಂಡ ನೀತು, ನುಚ್ಚಿಮಣಿಯಂಡ ಸ್ವಾತಿ, ತಿರ್ಕಚೇರಿರ ಅನಿತಾ, ಚಂಞಂಡ ಕನ್ನಿಕ ಸೂರಜ್, ಕೊಚ್ಚೆರ ನಿಧಿ, ಚೊಟ್ಟೇರ ಪವಿತ್ರ, ಸರ್ವಶ್ರೀ ನಂದೇಟಿರ ರವಿ, ಬಡುವಂಡ ವಿಜಯ, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ಪುದಿಯೋಕ್ಕಡ ಕಾಶಿ, ಪೆಮ್ಮುಡಿಯಂಡ ವೇಣು, ಚಂಞಂಡ ಸೂರಜ್, ಬೊಳ್ಳಚೆಟ್ಟಿರ ಸುರೇಶ್, ಡಾ.ಚೌರೀರ ಜಗತ್, ಅಮ್ಮಟಂಡ ಕಿಗ್ಗಲು ದೇವಯ್ಯ, ಚಂಞಂಡ ಚಾಮಿ, ಬಡುವಂಡ ಬೋಪಣ್ಣ, ಮೂಡೇರ ತಿಮ್ಮಯ್ಯ, ಬೊಳ್ಳಚೆಟ್ಟಿರ ಪ್ರಕಾಶ್, ತೇಲಪಂಡ ಸುಬಯ್ಯ, ಚೊಕ್ಕಂಡ ಕಟ್ಟಿ, ಕೋಟೇರ ರಾಜ, ಅಮ್ಮಟಂಡ ಕಿಗ್ಗಲ್ ದೇವಯ್ಯ, ಬಿದ್ದಂಡ ಸಂದೀಪ್, ಮುಕ್ಕಾಟಿರ ಕಿಟ್ಟು, ಪೂಳಂಡ ಪೂವಯ್ಯ, ಕೈಪಟ್ಟಿರ ಪ್ರಕಾಶ್, ಸೋಮೆಯಂಡ ರೇಶ, ಕೈಪಟ್ಟಿರ ಚಿಣ್ಣಪ್ಪ, ಬಾಚೀರ ಚಿಣ್ಣಪ್ಪ, ಅಮ್ಮಟಂಡ ಗೋಪಾಲ್, ಸ್ಮನಾತಂಡ ಚೆಂಗಪ್ಪ, ಬಡುವಂಡ ಗಿರೀಶ್, ಬಾರಿಯಂಡ ಸೂರಿ, ಮೂಡೇರ ಮನು, ಅಚ್ಚಕಾಳೇರ ಲಾಲು, ನುಚ್ಚಿಮಣಿಯಂಡ ಅಯ್ಯಪ್ಪ, ನೆರವಂಡ ಅನೂಪ್, ಬೊಳ್ಳಚೆಟ್ಟಿರ ಅಯ್ಯಪ್ಪ, ಪೆಮ್ಮಂಡ ಪವಿತ್ರ, ಬೊಳ್ಳಚೆಟ್ಟಿರ ಪ್ರವೀಣ್, ಕೊಳುಮಾಡಂಡ ಚೆಂಗಪ್ಪ, ನೆರವಂಡ ಗಿಲ್, ಮಂಡೇಪಂಡ ರವಿ, ತೆಲಪಂಡ ಸುಬ್ಬಯ್ಯ, ಅಮ್ಮಟಂಡ ಬೊಳ್ಳಿಯಪ್ಪ, ಪಳಂಗಂಡ ಗಣೇಶ್, ಕೋಟೆರ ಪ್ರತಾಪ್, ಪಳಂಗಂಡ ಪ್ರಕಾಶ್, ಪಳಂಗಂಡ ಅಪ್ಪಣ್ಣ, ಕೋಟೆರ ಮನು, ಪಳಿಂಗಿಯಂಡ ಶಂಬು, ಪಳಿಂಗಿಯಂಡ ತಿಮ್ಮಯ್ಯ, ಅವರೆಮಾಡಂಡ ಗಿರೀಶ್, ಪಳಿಂಗಿಯಂಡ ನಿತ್ಯ, ಪಳಂಗಿಯಂಡ ಭೀಮಯ್ಯ, ಅವರೆಮಾಡಂಡ ಸುಗುಣ, ಅಮ್ಮಂಡ ರಾಜ, ಅವರೆಮಾಡಂಡ ರಘು, ಪಳಂಗಂಡ ಈಶ್ವರ, ಪುದಿಯೊಕ್ಕಡ ರಾಜ, ಪೊರೆಯಂಡ ಪೊನ್ನು, ಪಳಿಂಗಿಯಂಡ ಸುರೇಶ್, ಪಳಿಂಗಿಯಂಡ ರಮೇಶ್, ಚಂಗನಮಕ್ಕಡ ವಿನು, ಕೋಟೇರ ಮೇದಪ್ಪ, ತೊತ್ತಿಯಂಡ ಬೊಳ್ಳಿಯಪ್ಪ, ಬೊಳ್ಳಚೆಟ್ಟಿರ ಅಚ್ಚಪ್ಪ, ಕೊಂಗಿರಂಡ ಗಣೇಶ್, ಬೊಳ್ತಂಡ ಕಿರಣ್, ಬೊಳ್ಳಚೆಟ್ಟಿರ ಕೃಷ್ಣ, ಬೊಳ್ಳಚೆಟ್ಟಿರ ಪೂಕುಂಞ, ಪಳಿಂಗಿಯಂಡ ಕಾವೇರಪ್ಪ, ಮಾಡೆಯಂಡ ಪ್ರೇಮ್, ಮಾಡೆಯಂಡ ಸತೀಶ್, ಕೈಪಟ್ಟಿರ ಚಿನ್ನಪ್ಪ, ಕಂಬೀರಂಡ ಯೋಗೇಶ್, ಮಾದೆಯಂಡ ಮಣಿ, ಮುಕ್ಕಾಟಿರ ಕಾವೇರಿಪ್ಪ, ಅವರೆಮಾಡಂಡ ಬೋಪಯ್ಯ, ಪೆರಿಯಂಡ ಕಿರಣ್, ಅಚ್ಚಪಂಡ ಚೆಂಗಪ್ಪ, ಮುಕ್ಕಾಟಿರ ಕಾರ್ಯಪ್ಪ, ಪಾಲಂದೀರ ಚೆಂಗಪ್ಪ, ಉದಿಯಂಡ ನಿಖಿಲ್, ಅಚ್ಚಕಾಳೇರ ತಮ್ಮಯ್ಯ, ಕೋಟೆರ ಪೆಮ್ಮಯ್ಯ, ಮಾದೆಯಂಡ ಉತ್ತಯ್ಯ, ಕೋಟೆರ ಕಾರ್ಯಪ್ಪ, ಮಾದೆಯಂಡ ಸೂರಜ್, ಕ್ಯಾತಂಡ ಕಾರ್ಯಪ್ಪ, ಚಾರಿಮಂಡ ದೇವಯ್ಯ, ಪಾಲಂದೀರ ದೇವಯ್ಯ, ಪೊಂಜಂಡ ಕಬೀರ್, ಪುದಿಯೋಕ್ಕಡ ಮಧು, ಕೋಟೆರ ಮುತ್ತಣ್ಣ, ಕುಟ್ಟಂಡ ಸಚಿ, ಪುದಿಯೋಕ್ಕಡ ವಿಪಿನ್, ಅರೆಯಡ ಗಿರೀಶ್, ಬೇಪಡಿಯಂಡ ದಿನು, ಬೊಟ್ಟಂಗಡ ಗಿರೀಶ್, ಕೂಪದೀರ ಸಾಬು ಮತ್ತಿತರರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎನ್‌ಸಿಯ ಶಾಂತಿಯುತ ಹೋರಾಟಕ್ಕೆ ಬೆಂಬಲ ಸೂಚಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.