Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 158ನೇ ಜನ್ಮ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 158ನೇ ಜನ್ಮ ದಿನಾಚರಣೆ*

ಸೆಪ್ಟೆಂಬರ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.18 NEWS DESK : ಅಲ್ಲಾರಂಡ ರಂಗಚಾವಡಿ ಮತ್ತು ಮಡಿಕೇರಿ ಕೊಡವ ಸಮಾಜದ ವತಿಯಿಂದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 158ನೇ ಜನ್ಮ ದಿನವನ್ನು ನಗರದಲ್ಲಿ ಸೆ.21 ರಂದು ಆಚರಿಸಲಾಗುತ್ತದೆಂದು ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೊಡವ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಅಪ್ಪಚ್ಚಕವಿ ಕಲಾ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಅಪ್ಪನೆರವಂಡ ಮನೋಜ್ ಮಂದಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಲ್ಲಾರಂಡ ರಂಗಚಾವಡಿ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಪಾಲ್ಗೊಳ್ಳಲಿದ್ದಾರೆಂದರು. :: ಸಾಕ್ಷ್ಯ ಚಿತ್ರ ಪ್ರದರ್ಶನ :: ಕಾರ್ಯಕ್ರಮದಲ್ಲಿ ತನ್ನ ನಿರ್ದೇಶನ ಮತ್ತು ನಿರ್ಮಾಣದ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿಗೆ ಸಂಬಂಧಿಸಿದ ಸಾಕ್ಷ್ಯ ಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿದೆಯೆಂದು ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದರು. ಸಾಕ್ಷ್ಯ ಚಿತ್ರ 30 ನಿಮಿಷದ್ದಾಗಿದ್ದು, ಪ್ರದರ್ಶನವನ್ನು ಕೊಡವ ಸಿನಿಮಾ ನಿರ್ಮಾಪಕಿ, ಸಹ ನಿರ್ದೇಶಕಿ ಹಾಗೂ ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆಂದರು. :: ಸಾಹಿತಿ ನಾಗೇಶ್ ಕಾಲೂರುರಿಗೆ ಸನ್ಮಾನ ::  ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರು ಸಾಹಿತ್ಯ ಕ್ಷೇತ್ರದತ್ತ ಒಲವು ತೋರುವ ಅಂದಿನ ದಿನಮಾನಗಳಲ್ಲಿ ಕೊಡವೇತರರಾದ ವೆಂಕಟಾದ್ರಿ ಶಾಮರಾವ್ ಸೇರಿದಂತೆ ಕೆಲವರು ಪ್ರೋತ್ಸಾಹಿಸಿದ್ದರು.ಈ ಹಿನ್ನೆಲೆಯಲ್ಲಿ ಅಪ್ಪನೆರವಂಡ ಅಪ್ಪಚ್ಚಕವಿಯ ಸ್ಮರಣೆಯ ಕಾರ್ಯಕ್ರಮದಲ್ಲಿ ಕೊಡವ ಭಾಷಾ ಸಾಹಿತ್ಯಕ್ಕೆ ನೀಡಿರುವ ಕೊಡುಗೆಗಳ ಹಿನ್ನೆಲೆಯಲ್ಲಿ ನಾಗೇಶ್ ಕಾಲೂರು ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆಂದು ಹೇಳಿದರು. :: ಪುಸ್ತಕಗಳ ಕುರಿತು ಚರ್ಚೆ:: ಕಾರ್ಯಕ್ರಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಉಳ್ಳಿಯಡ ಡಾಟಿ ಪೂವಯ್ಯ ಅವರು ರಚಿಸಿರುವ ‘ತೇನೆತ್ತೆಕಾರ’ ಪುಸ್ತಕದ ಕುರಿತು ಸಿನಿಮಾ ಕಲಾವಿದೆ ಚೆರುವಾಳಂಡ ಸುಜಲ ನಾಣಯ್ಯ ಅವರು ಮಾತನಾಡÀಲಿದ್ದಾರೆ. ಡಾ. ಮುಲ್ಲೇಂಗಡ ರೇವತಿ ಪೂವಯ್ಯ ಅವರು ರಚಿಸಿರುವ ‘ನೆಲಂಜೊಪ್ಪೆ’ ಕವನ ಸಂಕಲನದ ಕುರಿತು ಸಾಹಿತಿ ಕರವಂಡ ಸೀಮಾ ಗಣಪತಿ ಮತ್ತು ದಿ.ಪಳಂಗಂಡ ಚಂಗಪ್ಪ ಅವರು ಅನುವಾದಿಸಿರುವ ‘ಕೊಡಗ್‍ರ ಗೌರಮ್ಮಂಡ ಕಥೆಮೊತ್ತೆ’ ಕುರಿತು ಪುರಾತತ್ವ ಅಧ್ಯಯನಗಾರ್ತಿ ಮಾಳೇಟಿರ ಸೀತಮ್ಮ ವಿವೇಕ್ ಮತ್ತು ಸಾಹಿತಿ ಐಚಂಡ ರಶ್ಮಿ ಮೇದಪ್ಪ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆಂದರು. :: ಕವಿ ಗೋಷ್ಠಿ :: ಸಾಹಿತಿ ಬೊಟ್ಟೋಳಂಡ ದಿವ್ಯ ದೇವಯ್ಯ ಅವರು ಮಾತನಾಡಿ, ಅಪ್ಪನೆರವಂಡ ಅಪ್ಪಚ್ಚ ಕವಿ ಸ್ಮರಣೆಯ ಕಾರ್ಯಕ್ರಮದ ಸಂದರ್ಭ, ಕೊಡವ ಹಳೆಯ ಕೆಲ ಪದಗಳನ್ನು ಕೇಂದ್ರೀಕರಿಸಿ ಕವನಗಳನ್ನು ರಚಿಸುವಂತೆ ಕೋರಲಾಗಿತ್ತು.ಅದರಂತೆ ಬಂದಿರುವ ಸುಮಾರು 15 ರಿಂದ 18 ಕವನಗಳ ವಾಚನ ನಡೆಯಲಿದೆಯೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಾಹಿತ್ಯಾಸಕ್ತರಾದ ಅಯಲಪಂಡ ದೊರೆ ದೇವಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.