Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚೆಟ್ಟಳ್ಳಿಯಲ್ಲಿ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ : ಸಾಮಾಜಿಕ ಭದ್ರತಾ ಯೋಜನೆಗಳ ಸದುಪಯೋಗಕ್ಕೆ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿಯಲ್ಲಿ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ : ಸಾಮಾಜಿಕ ಭದ್ರತಾ ಯೋಜನೆಗಳ ಸದುಪಯೋಗಕ್ಕೆ ಸಲಹೆ

ಸೆಪ್ಟೆಂಬರ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.19 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಷ್ಣು ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ.ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000 ರೂ.ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು. ಅಲ್ಲದೆ 60 ವಯಸ್ಸು ಆದನಂತರದಲ್ಲಿ ಪಿಂಚಣಿರೂಪದಲ್ಲಿ 1000ರೂ ಗಳಿಂದ 5000ರೂ ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು. ನಂತರ ಆರ್ಥಿಕ ಸಮಾಲೋಚಕರದ ನಬಿ ಅವರು ಮಾತನಾಡಿ, ಪ್ರತಿಯೊಬ್ಬರು ರೀ ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು. ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು. ಆರ್ಥಿಕ ಸಮಾಲೋಚಕರಾದ ಸಿ.ಜಿ.ಹರೀಶ್ ಮಾತನಾಡಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು, ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ತಿಳಿಸಿದರು. ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ  ಆಸೀಪ್  ಮಾತನಾಡಿ, ಈ ಕಾರ್ಯಕ್ರಮವು ಅತ್ಯಂತ ಉಪಯುಕ್ತ ವಾದ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕ್ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹರೀಶ್ ಸ್ವಾಗತಿಸಿ, ನಿರೂಪಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು

ಚೆಟ್ಟಳ್ಳಿ, NEWS DESK ನ.9: ದೀಪಾವಳಿ ಹಬ್ಬದ ಪ್ರಯುಕ್ತ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಈ ವರ್ಷವೂ…

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026

ಲಾವಣ್ಯ ಬೋರ್ಕರ್ ಅವರಿಗೆ ಕೆ.ವಿ.ಜಿ. ರಾಜ್ಯೋತ್ಸವ ಪ್ರಶಸ್ತಿ

ನವೆಂಬರ್ 8, 2026

ಮಾದಕ ವ್ಯಸನದಿಂದ ಬದುಕು ಮತ್ತು ಜೀವ ಎರಡೂ ನಾಶ: ಡಾ. ಸಿ.ಎ. ಬೋಪಣ್ಣ

ನವೆಂಬರ್ 8, 2026

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.