Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸ್ಪೋರ್ಟ್ಸ್ ಕೋಟಾದಲ್ಲಿ ಭಾರತೀಯ ರೈಲ್ವೇಯಲ್ಲಿ ಉದ್ಯೋಗ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಿಂದ ಜಿ.ಪವಿತ್ರಾಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು

*ಸ್ಪೋರ್ಟ್ಸ್ ಕೋಟಾದಲ್ಲಿ ಭಾರತೀಯ ರೈಲ್ವೇಯಲ್ಲಿ ಉದ್ಯೋಗ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಿಂದ ಜಿ.ಪವಿತ್ರಾಗೆ ಸನ್ಮಾನ*

September 19, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ಸೆ.19 NEWS DESK : ಸ್ಪೋರ್ಟ್ಸ್ ಕೋಟಾದಲ್ಲಿ ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಗಳಿಸಿಕೊಂಡಿರುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿನಿ ಪವಿತ್ರಾ.ಜಿ ಇವರನ್ನು ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಟ್ರಿಪಲ್ ಜಂಪ್ ಮತ್ತು ಲಾಂಗ್ ಜಂಪ್‍ನಲ್ಲಿ ರಾಷ್ಟ್ರ ಮಟ್ಟದ ಸಾಧನೆಯನ್ನು ಮಾಡಿರುವ ಇವರು ಕಾಲೇಜಿನ ಎಂಬಿಎ ವಿಭಾಗದ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಬೆಂಗಳೂರಿನ ನೈರುತ್ಯ ರೈಲ್ವೇ ಕೇಂದ್ರ ಕಛೇರಿಯಲ್ಲಿ ನೇಮಕಾತಿಯನ್ನು ಹೊಂದಿದ್ದಾರೆ. ಉಡುಪಿಯ ಆರ್ಯಬೆಟ್ಟುವಿನ ಗೋಪಾಲ ಕುಲಾಲ್ ಮತ್ತು ಸುನಂದ ದಂಪತಿಯ ಪುತ್ರಿಯಾಗಿರುವ ಈಕೆ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣವನ್ನು ಪೆರ್ಡೂರಿನಲ್ಲಿ, ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ನಿಟ್ಟೆಯಲ್ಲಿ ಪೂರೈಸಿದ್ದು, ಎಂಬಿಎ ಶಿಕ್ಷಣವನ್ನು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಸಿದ್ದಾರೆ. ಎಂಬಿಎ ಪದವಿಯನ್ನು ಪಡೆಯುವ ಸಂದರ್ಭದಲ್ಲಿ ಕಾಲೇಜಿನಿಂದ ದೊರೆತ ಪೂರಕ ಬೆಂಬಲವನ್ನು ಸಂಪೂರ್ಣವಾಗಿ ಬಳಸಿಕೊಂಡ ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ, ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೂತನ ದಾಖಲೆಯೊಂದಿಗೆ ಚಿನ್ನದ ಪದಕ, ಒಡಿಶಾದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರಿಡಾಕೂಟದಲ್ಲಿ ಕಂಚಿನ ಪದಕ, ಚೆನ್ನೈನಲ್ಲಿ ನಡೆದ ಇಂಡಿಯನ್ ಗ್ರಾಂಡ್‍ಪ್ರಿಕ್ಸ್‍ನಲ್ಲಿ ಚಿನ್ನದ ಪದಕ, ಹರ್ಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬೆಳ್ಳಿಯ ಪದಕವನ್ನು ಗಳಿಸಿಕೊಂಡಿದ್ದರು. ನೇಮಕಾತಿಯ ನಂತರ ನಡೆದ ಅಖಿಲ ಭಾರತ ರೈಲ್ವೇ ಕ್ರೀಡಾಕೂಟದಲ್ಲಿ ಕಂಚಿನ ಪದಕದ ಸಾಧನೆಯನ್ನು ಮಾಡಿದ್ದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ಕಾಲೇಜಿನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಸಂತೋಷ್ ಕುತ್ತಮೊಟ್ಟೆ, ಡಾ.ಯಶೋಧಾ ರಾಮಚಂದ್ರ, ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ, ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಹಳೆಯ ಕಟ್ಟಡಗಳಿಗೆ ಸೆಸ್ ಪಡೆಯಬಾರದು :  ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮನವಿ*
Next Article *ದಸರಾ ಪ್ರಯುಕ್ತ ಶ್ರೀ ದಂಡಿನ ಮಾರಿಯಮ್ಮ ದೇವಿಗೆ ವಿಶೇಷ ಅಲಂಕಾರ ಪೂಜೆ*

Related Posts

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

ವಿರಾಜಪೇಟೆ NEWS DESK ಫೆ.12 : ವಿದ್ಯಾರ್ಥಿಗಳಲ್ಲಿ “ವಿವಿಧತೆಯಲ್ಲಿ ಏಕತೆ”ಯ ಮಹತ್ವವನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ನರ್ಸರಿ…

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.