
ಮಡಿಕೇರಿ ಸೆ.20 NEWS DESK : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಶರನ್ನವರಾತ್ರಿ ಅಂಗವಾಗಿ ಸೆ.22 ರಿಂದ ಅ.2ರ ವರೆಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ. ಪ್ರತೀ ದಿನ ಬೆಳಿಗ್ಗೆ 9.30 ಗಂಟೆಗೆ ಅಲಂಕಾರ ಪೂಜೆ ಜರುಗಲಿದೆ. ಸೆ.30 ರಂದು ದುರ್ಗಾಷ್ಟಮಿಯ ಅಂಗವಾಗಿ ಬೆಳಿಗ್ಗೆ 9.30 ಗಂಟೆಗೆ ಗಣಪತಿ ಹೋಮ, ಶ್ರೀ ದುರ್ಗಾ ಹವನ ನಡೆಯಲಿದೆ. ಮಧ್ಯಾಹ್ನ ಅನ್ನ ಸಂಪರ್ತಣೆ ನೆರವೇರಲಿದ್ದು, ಸಂಜೆ 7 ಗಂಟೆಗೆ ವಿಶೇಷ ದುರ್ಗಾ ಪೂಜೆ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.








